ವೀರಾಜಪೇಟೆ, ಮೇ 5: ವೀರಾಜಪೇಟೆಯ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಕುಡಿಯುವ ನೀರು ಸರಬರಾಜು ಮಾಡುವ ಬೇತರಿಯ ವಿತರಣಾ ಕೇಂದ್ರದಲ್ಲಿ ನಿರಂತರವಾಗಿ ಕೆಲವು ದಿನಗಳಿಂದ ವಿದ್ಯುತ್ ಸಂಪರ್ಕ ಕಡಿತಗೊಳ್ಳುತ್ತಿ ರುವದರಿಂದ ವೀರಾಜಪೇಟೆ ಪಟ್ಟಣಕ್ಕೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ.
ವಿದ್ಯುತ್ ಸಂಪರ್ಕ ಕಡಿತ ಗೊಳ್ಳುತ್ತಿರುವದಕ್ಕೆ ಚೆಸ್ಕಾಂ ಅಧಿಕಾರಿಗಳು ಕಾರಣ ನೀಡುತ್ತಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮುಖ್ಯಾಧಿಕಾರಿ ಹೇಮ್ಕುಮಾರ್ ತಿಳಿಸಿದ್ದಾರೆ.