ಮಡಿಕೇರಿ, ಮೇ 5: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳು 1967ರ ನಿಯಮ 10-ಬಿ ರಡಿಯಲ್ಲಿ ಮತದಾನ ಸಂಬಂಧ ಮೇ 10 ರಂದು ಬೆಳಿಗ್ಗೆ 06 ಗಂಟೆಯಿಂದ ತಾ. 12 ರ ಮಧ್ಯರಾತ್ರಿ 12 ಗಂಟೆಯವರೆಗೆ ಮತ್ತು ಮತ ಎಣಿಕೆ ಸಂಬಂಧ ತಾ. 14 ರಂದು ಮಧ್ಯರಾತ್ರಿ 12 ಗಂಟೆಯಿಂದ ತಾ. 15 ರ ಮಧ್ಯರಾತ್ರಿ 12 ಗಂಟೆಯವರೆಗೆ ಕೊಡಗು ಜಿಲ್ಲೆಯಾದ್ಯಂತ ಎಲ್ಲಾ ವಿಧದ ಮದ್ಯ ಸಾಗಾಣಿಕೆ, ಶೇಖರಣೆ ಮತ್ತು ಎಲ್ಲಾ ರೀತಿಯ ಅಂಗಡಿ, ಬಾರ್ ಮತ್ತು ರೆಸ್ಟೋರೆಂಟ್, ಕ್ಲಬ್, ಸ್ಟಾರ್ ಹೊಟೇಲ್ ಮುಂತಾದವುಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ.