ಸೋಮವಾರಪೇಟೆ,ಮೇ.6: ತಾಲೂಕು ಒಕ್ಕಲಿಗರ ಸಂಘದ ಬಿಟಿಸಿಜಿ ಪದವಿ ಪೂರ್ವ ಕಾಲೇಜಿನಲ್ಲಿ ತಾ. 7ರಂದು (ಇಂದು) ಪೂರ್ವಾಹ್ನ 11 ಗಂಟೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ. ಬೆಂಗಳೂರಿನ ಟೆನ್ ಸೆಕೆಂಡ್ಸ್ ತರಬೇತಿ ಸಂಸ್ಥೆಯ ನಿರ್ದೇಶಕ ಅನಿಜಿತ್ ಎ. ಶೆಟ್ಟಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಒಕ್ಕಲಿಗರ ಸಂಘದ ಅಧ್ಯಕ್ಷ ಎ.ಆರ್. ಮುತ್ತಣ್ಣ, ಕಾರ್ಯದರ್ಶಿ ಗಣಪತಿ, ಸದಸ್ಯ ಹೆಚ್.ಆರ್. ಸುರೇಶ್, ವಿದ್ಯಾಸಂಸ್ಥೆಯ ಸಂಚಾಲಕ ಜಗದೀಶ್, ತರಬೇತಿ ಸಂಸ್ಥೆಯ ರಾಮ್ಪ್ರಸಾದ್, ನಿವೃತ್ತ ಪ್ರಾಂಶುಪಾಲ ಬಾಲಕೃಷ್ಣ ಅವರುಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.