ಸೋಮವಾರಪೇಟೆ, ಮೇ 6: ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ದಲ್ಲಿ ಕಾರ್ಮಿಕ ದಿನಾಚರಣೆಯನ್ನು ಆಚರಿಸಲಾಯಿತು. ಪ್ರಧಾನ ಸಿವಿಲ್ ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರಿಗೆ ಸಿಗಬೇಕಾದ ಸೌಲಭ್ಯ ಸಿಗಬೇಕು. ಕಾರ್ಮಿಕರಿಗೆ ಅನ್ಯಾಯವಾದಾಗ ನ್ಯಾಯಾಲಯದ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಹೇಳಿದರು. ನಗರೂರು ಕಾಫಿ ತೋಟದ ವ್ಯವಸ್ಥಾಪಕ ಸ್ಟ್ಯಾನ್ಲಿ ರೋಜಾರಿಯೋ ಉಪಸ್ಥಿತರಿದ್ದರು.