ಮಡಿಕೇರಿ, ಮೇ 6: ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಪ್ರಸಕ್ತ (2018-19) ಸಾಲಿಗೆ ಪ್ರಥಮ ಬಿ.ಎ (ಎಚ್.ಇ.ಪಿ) ಮತ್ತು ಬಿ.ಕಾಂ ತರಗತಿಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ. ಕಾಲೇಜಿಗೆ ಪ್ರವೇಶ ಪಡೆಯುವ ಮಹಿಳಾ ವಿದ್ಯಾರ್ಥಿಗಳಿಗೆ ಬೋಧನಾ ಶುಲ್ಕದಿಂದ ವಿನಾಯಿತಿ ಇದ್ದು, ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಮತ್ತು ಆಸ್ಪತ್ರೆ ಕಾಲೇಜಿಗೆ ಸಮೀಪವಿದೆ. ಈ ಕಾಲೇಜು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದ ಬಳಿಯಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ ಹಾಗೂ ಬಸ್‍ಪಾಸ್ ವ್ಯವಸ್ಥೆ ಮಾಡಿಕೊಡಲಾಗುವದು. ಈ ಕಾಲೇಜು ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜನೆಗೆ ಒಳಪಟ್ಟಿದ್ದು, ಗ್ರಂಥಾಲಯ ವ್ಯವಸ್ಥೆ, ವಾಚನಾಲಯ, ವಿದ್ಯಾರ್ಥಿನಿಯರಿಗೆ ವಿಶ್ರಾಂತಿ ಕೊಠಡಿ, ಯುಜಿಸಿಯಿಂದ ಆಯ್ಕೆಗೊಂಡಿರುವ ಖಾಯಂ ನುರಿತ ಪ್ರಾಧ್ಯಾಪಕರಿಂದ ಬೋಧನೆ, ಸಾಂಸ್ಕøತಿಕ ಮತ್ತು ಕ್ರೀಡಾ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುವದು ಎಂದು ಪ್ರಕಟಣೆ ತಿಳಿಸಿದೆ.