ಶನಿವಾರಸಂತೆ, ಮೇ 8: ಸಮೀಪದ ಮೆಣಸ ಗ್ರಾಮದ ಬಸವೇಶ್ವರ ದೇವಸ್ಥಾನ ಸಮಿತಿ ವತಿಯಿಂದ ಶ್ರೀಬಸವೇಶ್ವರ ದೇವಸ್ಥಾನ ಪುನರ್ ಪ್ರತಿಷ್ಠಾಪನಾ ಮಹೋತ್ಸವ ತಾ. 9 ಮತ್ತು 10ರಂದು ನಡೆಯಲಿದೆ. 9 ರಂದು ಬೆಳಿಗ್ಗೆ 5 ಗಂಟೆಗೆ ಮನೆಹಳ್ಳಿ ತಪೋವನ ಕ್ಷೇತ್ರದ ಮಹಾಂತ ಸ್ವಾಮೀಜಿ ಸಾನಿಧ್ಯದಲ್ಲಿ ಗಂಗಾಪೂಜೆ, ಹೋಮ - ಹವನ, ಮಂಗಳಾರತಿ ಪೂಜಾ ಕಾರ್ಯಕ್ರಮಗಳು ನಡೆದು ಪ್ರಸಾದ ವಿನಿಯೋಗವಿರುತ್ತದೆ.
ತಾ. 10 ರಂದು ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ನೂತನ ಬಸವೇಶ್ವರ ವಿಗ್ರಹ ಪ್ರತಿಷ್ಠಾಪನೆ, ರುದ್ರಾಭಿಷೇಕ, ರುದ್ರಹೋಮ, ಪೂಜೆ, ಮಂಗಳಾರತಿ ಹಾಗೂ ಪ್ರಸಾದ ವಿನಿಯೋಗವಿರುತ್ತದೆ. 10.30 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಮನೆಹಳ್ಳಿ ಮಠದ ಮಹಾಂತಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವಸ್ವಾಮೀಜಿ, ಶಿಡಿಗಳಲೆ ಮಠದ ಇಮ್ಮಡಿ ಶಿವಲಿಂಗಸ್ವಾಮೀಜಿ, ಕೆಸವತ್ತೂರು ಸಿದ್ಧಲಿಂಗೇಶ್ವರ ವಿರಕ್ತ ಮಠದ ಬಸವರಾಜೇಂದ್ರ ಸ್ವಾಮೀಜಿ ಸಾನಿಧ್ಯ ವಹಿಸುತ್ತಾರೆ. ಕೊಡಗು ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಡಿ.ಬಿ. ಧರ್ಮಪ್ಪ ಸಭೆಯ ಅಧ್ಯಕ್ಷತೆ ವಹಿಸುತ್ತಾರೆ. ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ದೇವಿನ್ ವಿದ್ಯಾಸಂಸ್ಥೆ ಅಧ್ಯಕ್ಷ ಬಿ.ಎಂ. ದೇವರಾಜಪ್ಪ, ನಿವೃತ್ತ ಆಯುಕ್ತ ವಿರೂಪಾಕ್ಷಯ್ಯ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಬೆಂಗಳೂರಿನ ದೇವರಾಜಮ್ಮ, ಡಾ. ಲತಾ, ಸುರೇಶ್, ಸರಳಾಕ್ಷಿ, ಎಂ.ಕೆ. ಮಹೇಶ್, ದೇವಸ್ಥಾನ ಸಮಿತಿ ಅಧ್ಯಕ್ಷ ಎಸ್.ವಿ. ತ್ಯಾಗರಾಜ್ ಪಾಲ್ಗೊಳ್ಳುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.