ಹೆಬ್ಬಾಲೆ, ಮೇ 8: ಉತ್ತರ ಕೊಡಗಿನ ಹೆಬ್ಬಾಲೆ ಗ್ರಾಮದಲ್ಲಿ ಮಡಿಕೇರಿ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಮತಯಾಚನೆ ಮಾಡಿದರು.
ಗಡಿ ಗ್ರಾಮಗಳಾದ ಶಿರಂಗಾಲ, ತೊರೆನೂರು, ಸಿದ್ಧಲಿಂಗಪುರ, ಅಳುವಾರ, ಮಣಜೂರು ಗ್ರಾಮಗಳಿಗೆ ಕಾರ್ಯಕರ್ತರೊಂದಿಗೆ ಮನೆಗಳಿಗೆ ತೆರಳಿ ಮತಯಾಚಿಸಿದರು. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅಧಿಕಾರ ಸ್ವೀಕರಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅವಧಿಯಲ್ಲಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಅದೇ ರೀತಿ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಜಾರಿಗೊಳಿಸುತ್ತಿರುವ ಯೋಜನೆಗಳು ನಮ್ಮ ಗೆಲುವಿಗೆ ಶ್ರೀರಕ್ಷೆಯಾಗಿವೆ ಎಂದರು.
ಪಕ್ಷದ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಬಿಜೆಪಿ ಸರ್ಕಾರದ ಸಾಧನೆಗಳ ಬಗ್ಗೆ ಅರಿವು ಮೂಡಿಸ ಬೇಕು ಎಂದರು. ಈ ಬಾರಿ ಬಿಜೆಪಿಗೆ ಮತ ನೀಡುವ ಮೂಲಕ ನನ್ನ ಗೆಲುವಿಗೆ ಕಾರಣೀಭೂತ ರಾಗಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಜಿ.ಪಂ. ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್, ಮಾಜಿ ಅಧ್ಯಕ್ಷ ವಿ.ಎಂ. ವಿಜಯ್, ತಾ.ಪಂ. ಮಾಜಿ ಅಧ್ಯಕ್ಷೆ ಜ್ಯೋತಿ ಶಿವಣ್ಣ, ಮುಖಂಡರಾದ ಹೆಚ್.ಎಸ್. ರಾಜಶೇಖರ್, ಎನ್.ಎನ್. ಧರ್ಮಪ್ಪ, ಹೆಚ್.ಹೆಚ್. ಸುಂದರ್, ಹೆಚ್.ಎಸ್. ರಾಜಶೇಖರ್ ಮತ್ತಿತರರು ಇದ್ದರು.