ಸಿದ್ದಾಪುರ, ಮೇ 9: ಅಪ್ರಾಪ್ತ ಬಾಲಕನೋರ್ವನು ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಸಿದ್ದಾಪುರ ಸಮೀಪದ ಪಳ್ಳಕೆರೆ ಎಂಬಲ್ಲಿ ಈ ಘಟನೆ ನಡೆದಿದೆ. ಬಾಲಕನ ವಿರುದ್ಧ ಫೋಕ್ಸೋ ಕಾಯ್ದೆಯಡಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.