ಮಡಿಕೇರಿ, ಮೇ 9: ತಾ. 10 ರಂದು (ಇಂದು) ಮಡಿಕೇರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಕಾಂಗ್ರೆಸ್ ಮುಖಂಡರಿಂದ ಪಾದಯಾತ್ರೆ ನಡೆಯಲಿದ್ದು, ಜಿಲ್ಲೆÉಯ ಶಾಸಕರುಗಳನ್ನು ಬದಲಿಸಿ ಕಾಂಗ್ರೆಸ್‍ನ್ನು ಗೆಲ್ಲಿಸಿ ಎನ್ನುವ ಘೋಷ ವಾಕ್ಯದೊಂದಿಗೆ ಪಾದಯಾತ್ರೆ ನಡೆಯಲಿದೆ. ಕೇರಳದ ಮಾಜಿ ಮುಖ್ಯಮಂತ್ರಿ ಓಮನ್ ಚಾಂಡಿ ಪಾಲ್ಗೊಳ್ಳುವ ನಿರೀಕ್ಷೆ ಇದೆಯೆಂದು ಕಾಂಗ್ರೆಸ್ ವೀಕ್ಷಕ ವೆಂಕಪ್ಪ ಗೌಡ ತಿಳಿಸಿದ್ದಾರೆ.