ಕೂಡಿಗೆ, ಮೇ 9: ಕೂಡುಮಂಗಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಸವನತ್ತೂರು, ಚಿಕ್ಕತ್ತೂರು, ದೊಡ್ಡತ್ತೂರು, ಕೂಡಿಗೆ ಕೃಷಿ ಫಾರಂ ಗಳಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಎಂ.ಪಿ.ಅಪ್ಪಚ್ಚುರಂಜನ್ ಪರ ಬಿಜೆಪಿ ಮುಖಂಡರು ಮನೆ ಮನೆಗೆ ತೆರಳಿ ಕರಪತ್ರಗಳನ್ನು ಹಂಚಿ ಮತಯಾಚನೆಯಲ್ಲಿ ತೊಡಗಿದ್ದರು.
ಈ ಸಂದರ್ಭ ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ.ಜಯಂತ್, ಕೂಡುಮಂಗಳೂರು ಗ್ರಾಮ ಪಂಚಾಯ್ತಿ ಸದಸ್ಯೆ ಸಾವಿತ್ರಿರಾಜು, ಬಸವನತ್ತೂರು ಬೂತ್ ಸಮಿತಿಯ ಅಧ್ಯಕ್ಷ ಆರ್.ಕೆ.ಕೃಷ್ಣ, ಎಸ್‍ಸಿ ಘಟಕದ ಜಿಲ್ಲಾ ಸಮಿತಿ ನಿರ್ದೇಶಕ ವರದರಾಜ್‍ದಾಸ್, ಜಿಲ್ಲಾ ಮಹಿಳಾ ಘಟಕದ ಸದಸ್ಯೆ ಕೆ.ಕನಕ, ಕೂಡುಮಂಗಳೂರು ಮಹಿಳಾ ಘಟಕದ ಉಪಾಧ್ಯಕ್ಷೆ ನಿರ್ಮಲ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತಯಾಚನೆಯಲ್ಲಿ ತೊಡಗಿದ್ದರು.