ಮಡಿಕೇರಿ, ಮೇ 9: ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಸಂಬಂಧ ತಾ. 10 ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಳ್ಳಲಿದೆ. ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಪರ ಬಹಿರಂಗ ಪ್ರಚಾರ ಮುಕ್ತಾಯದ ಬಳಿಕ ಕ್ಷೇತ್ರದ ಮತದಾರರಲ್ಲದ ರಾಜಕೀಯ ವ್ಯಕ್ತಿಗಳು, ವಿವಿಧ ಪಕ್ಷಗಳ ಕಾರ್ಯಕರ್ತರು ಕ್ಷೇತ್ರಗಳಿಂದ ಹೊರ ಹೋಗುವಂತೆ ಚುನಾವಣಾ ಆಯೋಗದ ನಿರ್ದೇಶನಿವರುವದಾಗಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 12 ರಂದು ಮತದಾನಕ್ಕೆ ಮುಂಚಿತವಾಗಿ ತಾ. 10 ರಂದು (ಇಂದು) ಸಂಜೆ 6 ಗಂಟೆ ಬಳಿಕ, ಯಾವದೇ ಧ್ವನಿವರ್ಧಕ ಇತ್ಯಾದಿ 48 ಗಂಟೆಯೊಳಗೆ ಬಳಸುವಂತಿಲ್ಲವೆಂದು ಸ್ಪಷ್ಟಪಡಿಸಿದರು. ಅಲ್ಲದೆ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ತನಕ ಮಡಿಕೇರಿ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಎಲ್ಲಾ 538 ಮತಗಟ್ಟೆಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ನೆನಪಿಸಿದರು.

12 ಬಗೆಯ ಗುರುತು ಚೀಟಿ

ಮತದಾರರ ಪಟ್ಟಿಯಲ್ಲಿ ಹೆಸರಿರುವ ಪ್ರತಿಯೊಬ್ಬರಿಗೂ ಮತದಾನದ ಹಕ್ಕಿದ್ದು, ಮತದಾರರ ಗುರುತು ಚೀಟಿ ಇಲ್ಲದ ಸಂದರ್ಭ ಪಾಸ್‍ಪೋರ್ಟ್, ಡ್ರೈವಿಂಗ್ ಲೈಸನ್ಸ್, ಸರಕಾರಿ ಅಥವಾ ಸಾರ್ವಜನಿಕ

ಮಡಿಕೇರಿ, ಮೇ 9: ಕರ್ನಾಟಕ ವಿಧಾನಸಭೆಗೆ ನಡೆಯಲಿರುವ ಸಾರ್ವತ್ರಿಕ ಚುನಾವಣೆ ಸಂಬಂಧ ತಾ. 10 ರಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಮುಕ್ತಾಯಗೊಳ್ಳಲಿದೆ. ರಾಜಕೀಯ ಪಕ್ಷಗಳ ಮತ್ತು ಅಭ್ಯರ್ಥಿಗಳ ಪರ ಬಹಿರಂಗ ಪ್ರಚಾರ ಮುಕ್ತಾಯದ ಬಳಿಕ ಕ್ಷೇತ್ರದ ಮತದಾರರಲ್ಲದ ರಾಜಕೀಯ ವ್ಯಕ್ತಿಗಳು, ವಿವಿಧ ಪಕ್ಷಗಳ ಕಾರ್ಯಕರ್ತರು ಕ್ಷೇತ್ರಗಳಿಂದ ಹೊರ ಹೋಗುವಂತೆ ಚುನಾವಣಾ ಆಯೋಗದ ನಿರ್ದೇಶನಿವರುವದಾಗಿ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾ. 12 ರಂದು ಮತದಾನಕ್ಕೆ ಮುಂಚಿತವಾಗಿ ತಾ. 10 ರಂದು (ಇಂದು) ಸಂಜೆ 6 ಗಂಟೆ ಬಳಿಕ, ಯಾವದೇ ಧ್ವನಿವರ್ಧಕ ಇತ್ಯಾದಿ 48 ಗಂಟೆಯೊಳಗೆ ಬಳಸುವಂತಿಲ್ಲವೆಂದು ಸ್ಪಷ್ಟಪಡಿಸಿದರು. ಅಲ್ಲದೆ ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯ ತನಕ ಮಡಿಕೇರಿ ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಎಲ್ಲಾ 538 ಮತಗಟ್ಟೆಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ನೆನಪಿಸಿದರು.

12 ಬಗೆಯ ಗುರುತು ಚೀಟಿ

ಮತದಾರರ ಪಟ್ಟಿಯಲ್ಲಿ ಹೆಸರಿರುವ ಪ್ರತಿಯೊಬ್ಬರಿಗೂ ಮತದಾನದ ಹಕ್ಕಿದ್ದು, ಮತದಾರರ ಗುರುತು ಚೀಟಿ ಇಲ್ಲದ ಸಂದರ್ಭ ಪಾಸ್‍ಪೋರ್ಟ್, ಡ್ರೈವಿಂಗ್ ಲೈಸನ್ಸ್, ಸರಕಾರಿ ಅಥವಾ ಸಾರ್ವಜನಿಕ ವಿಧಾನಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕರು ಯಾವದೇ ಸಮಸ್ಯೆಗೆ ಸಿಲುಕಿದರೆ ತುರ್ತು ನಿಯಂತ್ರಣ ಕೊಠಡಿ ಸಂಖ್ಯೆ 08272-228305ಗೆ ಸಂಪರ್ಕಿಸಲು ಜಿಲ್ಲಾಧಿಕಾರಿ ಸಲಹೆ ನೀಡಿದರು.

ಪರಿಶೀಲನೆ: ಅನೇಕ ಕಡೆ ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೂ ಗುರುತು ಚೀಟಿ ಲಭಿಸದಿರುವದು ಅಥವಾ ಹೊಸ ಸೇರ್ಪಡೆಯಾದವರಿಗೆ ಇನ್ನು ಕೂಡ ಆಯೋಗದಿಂದ ಗುರುತು ಚೀಟಿ ಲಭಿಸದಿರುವ ದೂರುಗಳ ಬಗ್ಗೆ ಉತ್ತರಿಸಿದ ಜಿಲ್ಲಾಧಿಕಾರಿ; ಈ ದಿಸೆಯಲ್ಲಿ ಇತರ 12 ಬಗೆಯ ಗುರುತು ತೋರಿಸಿ ಅವಕಾಶ ಕಲ್ಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಬದಲಾಗಿ ದೂರುಗಳ ಬಗ್ಗೆ ಚುನಾವಣೆ ಬಳಿಕ ಪರಿಶೀಲಿಸುವದಾಗಿ ಭರವಸೆ ನೀಡಿದರು. ಗೋಷ್ಠಿಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸತೀಶ್‍ಕುಮಾರ್ ಹಾಜರಿದ್ದರು.