ಮಡಿಕೇರಿ, ಮೇ 10: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ 2014ರ ನಂತರ ವಿತರಿಸಿದ ರಾಷ್ಟ್ರೀಯ ಸ್ವಾಸ್ಥ ಭೀಮಾ ಯೋಜನೆಯ ಕಾರ್ಡ್‍ಗಳಿಗೆ ಆಗಸ್ಟ್ 31, 2018 ರವರೆಗೆ ರೂ. 30 ಸಾವಿರ ರೂ.ಗಳವರೆಗೆ ಉಚಿತ ಚಿಕಿತ್ಸೆ ನೀಡಲು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ಧರಿಸಿದೆ. ಆರ್‍ಎಸ್‍ಬಿವೈ ಸ್ಮಾರ್ಟ್ ಕಾರ್ಡು ಹೊಂದಿರುವವರು ಚಿಕಿತ್ಸೆಗಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆಗಳಲ್ಲಿ ಹಾಗೂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‍ನ ಜಿಲ್ಲಾ ಸಮನ್ವಯಾಧಿಕಾರಿ ಡಿ.ಸಿ. ತೇಜಸ್ (7259003403) ಹಾಗೂ ಸರ್ಕಾರಿ ಆರೊಗ್ಯ ಕೇಂದ್ರಗಳ ಆರೋಗ್ಯ ಮಿತ್ರರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.