ಕೂಡಿಗೆ, ಮೇ 10: ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಅವರ ಪರವಾಗಿ ಅಪ್ಪಚ್ಚು ರಂಜನ್ ಪುತ್ರ ವಿಕ್ರಮ್ ಅಪ್ಪಚ್ಚು ಹಾಗೂ ಅಳಿಯ ಆದಿತ್ಯ ಅವರ ನೇತೃತ್ವದಲ್ಲಿ ಕೂಡಿಗೆ, ಕೂಡುಮಂಗಳೂರು, ಮುಳ್ಳುಸೋಗೆ ಗ್ರಾ.ಪಂ. ವ್ಯಾಪ್ತಿಯ ಗ್ರಾಮಗಳಲ್ಲಿ ಬಿರುಸಿನ ಚುನಾವಣಾ ಪ್ರಚಾರ ನಡೆಯಿತು.
ಕೂಡಿಗೆ, ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ಬಿಜೆಪಿ ಕಾರ್ಯಕರ್ತರು ಮತಯಾಚನೆಯಲ್ಲಿ ತೊಡಗಿದ್ದರು. ಈ ಸಂದರ್ಭ ತಾಲೂಕು ಬಿಜೆಪಿ ಉಪಾಧ್ಯಕ್ಷ ಕೆ.ಕೆ. ಭೋಗಪ್ಪ, ತಾಲೂಕು ಯುವ ಮೋರ್ಚಾದ ಉಪಾಧ್ಯಕ್ಷ ಚಂದ್ರು ಮೂಡ್ಲಿಗೌಡ, ತಾಲೂಕು ಎಸ್.ಟಿ. ಘಟಕದ ಅಧ್ಯಕ್ಷ ಪ್ರಭಾಕರ್, ಎಸ್.ಸಿ. ಘಟಕದ ಅಧ್ಯಕ್ಷ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ, ತಾ.ಪಂ. ಸದಸ್ಯ ಗಣೇಶ್, ಕೂಡುಮಂಗಳೂರು ಯುವ ಮೋರ್ಚಾದ ಅಧ್ಯಕ್ಷ ಶಶಿಕಿರಣ್, ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಸಾವಿತ್ರಿ ರಾಜು, ಪಾರ್ವತಮ್ಮ, ಕೂಡಿಗೆ, ಕೂಡುಮಂಗಳೂರು, ಕೂಡ್ಲೂರು ಗ್ರಾಮಗಳ ಬಿಜೆಪಿ ಘಟಕಗಳ ಪದಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಮಹಿಳಾ ಘಟಕಗಳ ಪದಾಧಿಕಾರಿ, ಕಾರ್ಯಕರ್ತರು ಮತಯಾಚನೆಯಲ್ಲಿ ತೊಡಗಿದ್ದರು.