ಕೂಡಿಗೆ, ಮೇ 10: ಚುನಾವಣಾ ಆಯೋಗದ ನಿರ್ದೇಶನದಂತೆ ಶಿರಂಗಾಲದ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಶಿರಂಗಾಲದ ಮುಖ್ಯ ರಸ್ತೆಗಳಲ್ಲಿ ಜಾಥಾ ಮಾಡುವ ಮೂಲಕ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು.
ಶಿರಂಗಾಲ ಗೇಟ್ನಲ್ಲಿ ಮಾನವ ಸರಪಳಿ ನಿರ್ಮಿಸಿ, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಹಂಡ್ರಂಗಿ ನಾಗರಾಜ್ ಮಾತನಾಡಿ, 18 ವರ್ಷ ತುಂಬಿದ, ಮತದಾರ ಪಟ್ಟಿಯಲ್ಲಿ ಹೆಸರಿರುವ ಎಲ್ಲಾ ಮತದಾರರು ಮತ ಹಾಕಬೇಕು. ಪ್ರಜಾಪ್ರಭುತ್ವದ ಉಳಿವು ನಮ್ಮೆಲ್ಲರ ಮತದಾನದಲ್ಲಿ ಅಡಕವಾಗಿದೆ ಎಂದರು.
ವಿದ್ಯಾರ್ಥಿಗಳು ಪ್ರತಿಯೊಬ್ಬರ ಮನೆಗಳಿಗೆ ತೆರಳಿ ಮತದಾನ ಮಾಡುವಂತೆ ಪ್ರೇರೇಪಿಸಿದರು. ಜಾಥಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಎಂ.ಆರ್. ಸುರೇಶ್ ಕುಮಾರ್, ಉಪನ್ಯಾಸಕರಾದ ಹೆಚ್.ಆರ್. ಶಿವಕುಮಾರ್, ಸಿ.ಎಸ್. ಹೇಮಲತ ಭಾಗವಹಿಸಿದ್ದರು.