ಶನಿವಾರಸಂತೆ, ಮೇ 10: ಪಟ್ಟಣದ ಗುಂಡೂರಾವ್ ಬಡಾವಣೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬಿ.ಎ. ಜೀವಿಜಯ ಪರ ಬಿರುಸಿನ ಮತ ಪ್ರಚಾರ ನಡೆಸಿದರು.

ಜೆಡಿಎಸ್ ಜಿಲ್ಲಾ ಕಾರ್ಯದರ್ಶಿ ಎಂ.ಪಿ. ಮಹೇಶ್ ಹಾಗೂ ಶನಿವಾರಸಂತೆ ನಗರ ಅಧ್ಯಕ್ಷ ಸರ್ದಾರ್ ಅಹಮ್ಮದ್ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಮನೆಮನೆಗೆ ತೆರಳಿ ಮತ ಯಾಚಿಸಿದರು. ಪ್ರಮುಖರಾದ ಎನ್.ಕೆ. ಅಪ್ಪಸ್ವಾಮಿ, ಮಂಜುನಾಥ್, ಗಿರೀಶ್, ವಸಂತ್, ಶಬೀರ್ ಅಹಮ್ಮದ್ ಮತ್ತಿತರರು ಇದ್ದರು.