ಸೋಮವಾರಪೇಟೆ, ಮೇ 10: ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಅಪ್ಪಚ್ಚು ರಂಜನ್ ಪರವಾಗಿ ಬಿಜೆಪಿ ಕಾರ್ಯಕರ್ತರು ಯಡೂರು ಗ್ರಾಮದಲ್ಲಿ ಮತಯಾಚನೆ ಮಾಡಿದರು. ಜಿ. ಪಂ. ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಸದಸ್ಯೆ ತಂಗಮ್ಮ, ಪಕ್ಷದ ಮುಖಂಡರಾದ ರಘು, ಭಾನುಪ್ರಕಾಶ್ ಸೇರಿದಂತೆ ಇತರ ಕಾರ್ಯಕರ್ತರು ಮನೆ ಮನೆಗೆ ತೆರಳಿ ಬಿಜೆಪಿ ಪರ ಮತಯಾಚಿಸಿದರು.