ಮಡಿಕೇರಿ, ಮೇ 10: ರಾಜ್ಯ ಸಹಕಾರ ಮಹಾಮಂಡಳ ವತಿಯಿಂದ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿ ಸಂಸ್ಥೆಯಿಂದ ಸಹಕಾರ ಸಂಘ-ಸಂಸ್ಥೆ/ ಸಹಕಾರ ಇಲಾಖೆ/ ಸಹಕಾರ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಇತರೆ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳ ಅವಧಿಯ “ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್” ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಪಡೆಯಲು ಇಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ/ಸಹಕಾರ ಇಲಾಖೆ/ ಸಹಕಾರ ಲೆಕ್ಕ ಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು. ಇತರೆ ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶ ಕಲ್ಪಿಸಲಾಗಿದೆ.

ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿದ್ದಾರೆ. ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ. 400 ಶಿಷ್ಯ ವೇತನ ನೀಡಲಾಗುವದು.

ಅರ್ಜಿಯನ್ನು ಆಯಾಯ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಮಡಿಕೇರಿ ಹಾಗೂ ಹಾಸನ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಇವರ ಮೂಲಕ ತಾ. 31 ರೊಳಗಾಗಿ ಸಲ್ಲಿಸಬಹುದು.

ಪ್ರಸಕ್ತ ತರಬೇತಿ ಅಧಿವೇಶನ ಜುಲೈ 2 ರಿಂದ ಪ್ರಾರಂಭವಾಗಲಿದೆ. ಸಹಕಾರ ತರಬೇತಿಯ ಅರ್ಜಿ ಫಾರಂ ಮತ್ತು ವಿವರಣಾ ಪುಸ್ತಕವನ್ನು ತರಬೇತಿ ಸಂಸ್ಥೆಯಿಂದ ಪಡೆಯಬಹುದು. ಅರ್ಜಿ ಮತ್ತು ವಿವರಣಾ ಪುಸ್ತಕದ ಶುಲ್ಕ ರೂ. 75 (ರೂ. ಎಪ್ಪತ್ತೈದು ಮಾತ್ರ)ಗಳನ್ನು ನಗದಾಗಿ ಪಾವತಿಸಿ ತರಬೇತಿ ಸಂಸ್ಥೆಯಲ್ಲಿ ಪಡೆಯಬಹುದು. ಅಂಚೆ ಮೂಲಕ ಪಡೆಯಲು ಇಚ್ಛಿಸುವವರು ರೂ. 125 (ರೂ. ಒಂದು ನೂರ ಇಪ್ಪತ್ತೈದು ಮಾತ್ರ) ಡಿ.ಡಿ. ಮೂಲಕ ಪಾವತಿಸಿ ಪಡೆಯಬಹುದಾಗಿದೆ.

ತರಬೇತಿಗೆ ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡಿ ಮಡಿಕೇರಿ ತರಬೇತಿ ಸಂಸ್ಥೆಯ ಪ್ರಾಂಶುಪಾಲರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08272-228437/ 9902189872 /9535250704/9449245024 ನ್ನು ಸಂಪರ್ಕಿಸಬಹುದಾಗಿದೆ ಎಂದು ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಪ್ರಾಂಶುಪಾಲ ಪುಟ್ಟಸ್ವಾಮಿ ತಿಳಿಸಿದ್ದಾರೆ.