ಮಡಿಕೇರಿ, ಮೇ 15 : ಪ್ರಸಕ್ತ (2018-19) ಸಾಲಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ.

ಷರತ್ತುಗಳು: 5ನೇ ತರಗತಿಯಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು, ಆಯ್ಕೆಯಾದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಾದ ಶ್ರೀ ಸಾಯಿ ಶಂಕರ ಶೈಕ್ಷಣಿಕ ಸಂಸ್ಥೆ ಪ್ರಶಾಂತಿ ನಿಲಯ ಪೊನ್ನಂಪೇಟೆ, ಸಂತ ಜೋಸೆಫ್ ಬಾಲಕಿಯರ ಪ್ರೌಢಶಾಲೆ ಮಡಿಕೇರಿ ಇಲ್ಲಿ 6ನೇ ತರಗತಿಗೆ ಪ್ರವೇಶ ಅವಕಾಶ ಕಲ್ಪಿಸಲಾಗುವುದು, ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿ ಸಲ್ಲಿಸುವುದು, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ 2 ಲಕ್ಷ ರೂ. ಒಳಗೆ ಇರಬೇಕು. (ಈ ಬಗ್ಗೆ ತಹಶೀಲ್ದಾರರವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವದು).

ಅರ್ಜಿಯನ್ನು ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ- 08272-229983, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ-08274-261261, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 08272-223552, ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115 ಇಲ್ಲಿ ಪಡೆಯಬುದಾಗಿದೆ.