ಮಡಿಕೇರಿ, ಮೇ 15 : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪಧವೀಧರರ ಕ್ಷೇತ್ರದ, ನ್ಶೆರುತ್ಯ ಶಿಕ್ಷಕರ ಕ್ಷೇತ್ರದ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ವೇಳಾಪಟ್ಟಿ ಪ್ರಕಟಿಸಿದೆ.
ಕಾರ್ಯಸೂಚಿಯ ವೇಳಾ ಪಟ್ಟಿಯ ವಿವರ ಇಂತಿದೆ: ಚುನಾವಣಾ ಆಯೋಗವು ಮೇ 15 ರಂದು ಅಧಿಸೂಚನೆ ಹೊರಡಿಸಿದೆ. ತಾ. 22 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ತಾ. 23 ರಂದು ನಾಮಪತ್ರ ಪರಿಶೀಲನಾ ಕಾರ್ಯ ನಡೆಯಲಿದೆ. ತಾ. 25 ರಂದು ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆ ದಿನವಾಗಿದೆ. ಜೂನ್ 8 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದೆ. ಜೂನ್ 12 ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾಧಿಕಾರಿ ಪಿ.ಹೇಮಲತಾ ಅವರು ತಿಳಿಸಿದ್ದಾರೆ.