ಮಡಿಕೇರಿ, ಮೇ. 16: ಪ್ರಸಕ್ತ ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಗೆ ಸೇರಿದಂತೆ ಮತ ಎಣಿಕೆ ಪ್ರಕ್ರಿಯೆ ಸುಸೂತ್ರವಾಗಿ ನಡೆದಿದೆ. ಎಲ್ಲವೂ ಶಾಂತಿಯುತವಾಗಿ ಜರುಗಿದೆ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಹರ್ಷ ವ್ಯಕ್ರಪಡಿಸಿದ್ದಾರೆ. ‘ಶಕ್ತಿ’ಯೊಂದಿಗೆ ಮಾತನಾಡಿದ ಅವರು ರಾಜಕೀಯ ಪಕ್ಷಗಳು, ಅಧಿಕಾರಿ ವರ್ಗ ಸೇರಿದಂತೆ ಸಾರ್ವಜನಿಕರೂ ಸೂಕ್ತ ಸಹಕಾರ ನೀಡಿದ್ದಾರೆ. ಅಲ್ಲದೆ ಈ ಬಾರಿ ಹೆಚ್ಚು ಮತದಾನವಾಗಿರುವದು ಸಂತಸ ಮೂಡಿಸಿದೆ ಎಂದು ಹೇಳಿದರು. ಮಳೆಯಿಂದಾಗಿ ಸ್ವಲ್ಪಮಟ್ಟಿಗೆ ಸಮಸ್ಯೆಯಾದರೂ ಎಲ್ಲವನ್ನೂ ಸುಸೂತ್ರವಾಗಿ ನಿಭಾಯಿಸಲಾಗಿದೆ ಎಂದು ಅವರು ತಿಳಿಸಿದರು.