ಸೋಮವಾರಪೇಟೆ, ಮೇ 17: ಭಾರತೀಯ ಜನತಾ ಪಕ್ಷದ ಹುದ್ದೆಗಳಲ್ಲಿದ್ದುಕೊಂಡು ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ವಿರುದ್ದ ಕೆಲಸ ಮಾಡಿದವರು ತಾವಾಗಿಯೇ ಹುದ್ದೆ ತ್ಯಜಿಸಿ ಸಾಮಾನ್ಯ ಕಾರ್ಯಕರ್ತರಂತೆ ಕೆಲಸ ಮಾಡಲಿ ಎಂದು ಪಕ್ಷದ ತಾಲೂಕು ಅಧ್ಯಕ್ಷ ಎಂ.ಎನ್. ಕುಮಾರಪ್ಪ ಹೇಳಿದರು.ರಾಜ್ಯದ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಸೋಮವಾರಪೇಟೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಆಯೋಜಿಸಿದ್ದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಕಾರ್ಯಕರ್ತರ ಶ್ರಮದಿಂದ ಬಿಜೆಪಿ ಜಯಗಳಿಸಿದ್ದು, ಪಕ್ಷದಲ್ಲಿದ್ದುಕೊಂಡೇ ವಿರೋಧಿ ಕೆಲಸ ಮಾಡಿದ ಕೆಲ ಮುಖಂಡರೆನಿಸಿಕೊಂಡವರು ತಾವಾಗಿಯೇ ಪಕ್ಷದ ಹುದ್ದೆಗಳನ್ನು ತ್ಯಜಿಸಿ ಸಾಮಾನ್ಯ ಕಾರ್ಯಕರ್ತರಂತೆ ಕೆಲಸ ಮಾಡಲಿ ಎಂದು ಕುಮಾರಪ್ಪ ಅಭಿಪ್ರಾಯಿಸಿದರು.
ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿದ ಕಾರ್ಯಕರ್ತರು ಬಿ.ಎಸ್. ಯಡಿಯೂರಪ್ಪ ಅವರಿಗೆ ಜೈಕಾರ ಕೂಗಿದರು.
ಸಂಭ್ರಮಾಚರಣೆಯಲ್ಲಿ ಪಕ್ಷದ ತಾಲೂಕು ಕಾರ್ಯದರ್ಶಿ ಮನುಕುಮಾರ್ ರೈ, ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕಿಬ್ಬೆಟ್ಟ ಮಧು, ನಗರಾಧ್ಯಕ್ಷ ಶರತ್ಚಂದ್ರ, ಪಕ್ಷದ ನಗರಾಧ್ಯಕ್ಷ ಸೋಮೇಶ್, ಪ.ಪಂ. ಸದಸ್ಯೆ ಲೀಲಾ ನಿರ್ವಾಣಿ, ಪ್ರಮುಖರಾದ ನಳಿನಿಗಣೇಶ್, ಪಿ. ಮಧು, ಟಿ.ಕೆ. ರಮೇಶ್, ಹರಗ ಉದಯ ಸೇರಿದಂತೆ ಇತರರು ಭಾಗವಹಿಸಿದ್ದರು.
ಗೋಣಿಕೊಪ್ಪಲು : ವಾಣಿಜ್ಯ ನಗರ ಗೋಣಿಕೊಪ್ಪಲುವಿನಲ್ಲಿ ನಗರ ಬಿಜೆಪಿ ವತಿಯಿಂದ ವಿಜಯೋತ್ಸವ ಆಚರಿಸಲಾಯಿತು. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಕೆ. ಬೋಪಣ್ಣ ಮುಂದಾಳತ್ವದಲ್ಲಿ ನಗರದ ಬಸ್ ನಿಲ್ದಾಣದಲ್ಲಿ ಸಮಾಗಮಗೊಂಡ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಈ ಸಂದರ್ಭ ಬಿಜೆಪಿಯ ಹಿರಿಯ ಮುಖಂಡರಾದ ಕಾಡ್ಯಮಾಡ ಗಿರೀಶ್ ಗಣಪತಿ ಮಾತನಾಡಿ, ಮುಂದೆ ರಾಜ್ಯದಲ್ಲಿ ಉತ್ತಮ ಕೆಲಸ ಕಾರ್ಯಗಳು ನಡೆಯಲಿದ್ದು, ಬಡವರ ಪರ ಸರ್ಕಾರ ಉತ್ತಮ ಯೋಜನೆ ರೂಪಿಸಲಿದೆ ಎಂದರು.
ತಾಲೂಕು ಮಹಿಳಾ ಮೋರ್ಚಾದ ಅಧ್ಯಕ್ಷೆ ಚೇಂದಂಡ ಸುಮಿ ಸುಬ್ಬಯ್ಯ, ರಾಣಿ ನಾರಾಯಣ, ಬಿಜೆಪಿ ನಗರ ಅಧ್ಯಕ್ಷ ಮಲ್ಚೀರ ಗಾಂಧಿ ದೇವಯ್ಯ, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ, ಪ್ರಮುಖರಾದ ನರಸಿಂಹ, ಜಪ್ಪು ಅಚ್ಚಪ್ಪ, ರತಿ ಅಚ್ಚಪ್ಪ, ಮೂಕಳೇರ ಮಧು, ರಮೇಶ್, ನಾಗು, ಸಣ್ಣುವಂಡ ರಜನ್ ತಿಮ್ಮಯ್ಯ, ಅಶೋಕ್ ರೈ, ಸುರೇಶ್, ಮದನ್ ಶೆಟ್ಟಿ ಮುಂತಾದವರು ಹಾಜರಿದ್ದರು. ಇದಕ್ಕೆ ಮೊದಲು ಬಸ್ ನಿಲ್ದಾಣ ಸಮೀಪವಿರುವ ಭಗವ ಧ್ವಜವನ್ನು ಪ್ರಮುಖರು ಹಾರಿಸಿ ಗೌರವ ಸೂಚಿಸಿದರು.
ಗುಡ್ಡೆಹೊಸೂರು: ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಗುಡ್ಡೆಹೊಸೂರು ವೃತ್ತದ ಬಳಿ ಬಿ.ಜೆ.ಪಿ. ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.
ಕುಶಾಲನಗರ: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆ ಕುಶಾಲನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಗಣಪತಿ ದೇವಾಲಯ ಮುಂಭಾಗ ಸೇರಿದ ಕಾರ್ಯಕರ್ತರು ಪ್ರಧಾನಿ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಪರ ಘೋಷಣೆಗಳನ್ನು ಕೂಗಿದರು. ಪಟಾಕಿ ಸಿಡಿಸಿ ಸಿಹಿ ಹಂಚಿದರು.
ಈ ಸಂದರ್ಭ ಮಾತನಾಡಿದ ಬಿಜೆಪಿ ನಗರಾಧ್ಯಕ್ಷ ಕೆ.ಜಿ. ಮನು, ಜನಾದೇಶದಂತೆ ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ ಎಂದರು. ಕಾಂಗ್ರೆಸ್ ಸರಕಾರದ ದುರಾಡಳಿತ ಹಾಗೂ ಮೋದಿ ಪರ ಅಲೆಯ ಕಾರಣ ಬಿಜೆಪಿ ಅಧಿಕಾರಕ್ಕೆ ಬಂದಿದ್ದು ರೈತ ನಾಯಕ ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವದು ರಾಜ್ಯದ ಅಭಿವೃದ್ಧಿಯ ಸಂಕೇತ ಎಂದರು.
ಈ ಸಂದರ್ಭ ಜಿ.ಪಂ. ಸದಸ್ಯೆ ಕೆ.ಆರ್. ಮಂಜುಳಾ, ಯುವ ಮೋರ್ಚಾ ತಾಲೂಕು ಕಾರ್ಯಾಧ್ಯಕ್ಷ ಎಂ.ಡಿ. ಕೃಷ್ಣಪ್ಪ, ಪ.ಪಂ. ಸದಸ್ಯ ಡಿ.ಕೆ. ತಿಮ್ಮಪ್ಪ, ಪ್ರಮುಖರಾದ ನಾರಾಯಣ, ಜಿ.ಎಲ್. ನಾಗರಾಜ್, ಭಾಸ್ಕರ್ ನಾಯಕ್, ನಗರ ಘಟಕದ ಉಪಾಧ್ಯಕ್ಷ ಮಂಡೇಪಂಡ ಬೋಸ್ ಮೊಣ್ಣಪ್ಪ, ಕಾರ್ಯದರ್ಶಿ ಶಿವಾಜಿ, ಹೆಚ್.ಎನ್. ರಾಮಚಂದ್ರ, ಸರಳಾ ರಾಮಣ್ಣ, ಡಾಟಿ, ಪುಷ್ಪ, ರುದ್ರಾಂಬಿಕೆ, ನಿರ್ಮಲಾ, ವಿಮಲಾ ಮತ್ತಿತರರು ಇದ್ದರು.
ಸುಂಟಿಕೊಪ್ಪ: ರಾಜ್ಯದ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಿಸಿದರು.
ಸುಂಟಿಕೊಪ್ಪ ನಗರ ಬಿಜೆಪಿ ಅಧ್ಯಕ್ಷ ಪಿ.ಆರ್. ಸುನಿಲ್ ಕುಮಾರ್ ಹಾಗೂ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಬಿಜೆಪಿ ಧ್ವಜವನ್ನು ಹಿಡಿದು ಜಮಾವಣೆಗೊಂಡು ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ, ಯಡಿಯೂರಪ್ಪ ಅವರಿಗೆ ಜೈಕಾರ ಕೂಗಿದರು. ಕನ್ನಡ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
ತಾ.ಪಂ. ಸದಸ್ಯೆ ವಿಮಲಾವತಿ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಬಿ.ಕೆ. ಮೋಹನ್, ಕಾರ್ಯದರ್ಶಿ ಪ್ರಶಾಂತ್ (ಕೊಕ), ಗ್ರಾಮ ಪಂಚಾಯಿತಿ ಸದಸ್ಯರಾದ ಸಿ. ಚಂದ್ರ, ಗಿರಿಜಾ ಉದಯಕುಮಾರ್, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಬಿ.ಐ. ಭವಾನಿ, ಗ್ರಾ.ಪಂ. ಮಾಜಿ ಸದಸ್ಯ ಆನಂದ, ಯುವ ಮೋರ್ಚಾ ಅಧ್ಯಕ್ಷ ರಂಜಿತ್ ಕುಮಾರ್, ಹಿಂದುಳಿದ ವರ್ಗದ ಅಧ್ಯಕ್ಷ ನಾಗೇಶ್ ಪೂಜಾರಿ, ಬಿಜೆಪಿ ಮಾಜಿ ಯುವ ಮೋರ್ಚಾ ಅಧ್ಯಕ್ಷ ಧನು ಕಾವೇರಪ್ಪ, ಬಿಜೆಪಿ ಮುಖಂಡರುಗಳಾದ ಜಿ. ರಾಜನ್, ಟಿ.ಆರ್. ವಿನೋದ್, ಬಿ.ಕೆ. ಗಿರೀಶ, ಮಹಿಳಾ ಸಮಾಜದ ಅಧ್ಯಕ್ಷೆ ಲೀಲಾ ಮೇದಪ್ಪ, ಗೀತಾ ವಿಶ್ವನಾಥ್ ಹಾಗೂ ಪಕ್ಷದ ಕಾರ್ಯಕರ್ತರು ಇದ್ದರು.
ಸಿದ್ದಾಪುರ: ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯ ಎರಡೂ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಬಹುಮತದಿಂದ ಜಯಗಳಿಸಿರುವ ಹಿನ್ನೆಯಲ್ಲಿ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷಗಳನ್ನು ಹಾಕುತ್ತಾ ಸಂಭ್ರಮಿಸಿದರು.
ಈ ಸಂಧರ್ಭ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿ.ಕೆ ಲೋಕೇಶ್, ತಾ.ಪಂ ಸದಸ್ಯ ಜನೀಶ್, ಸ್ಥಾನಿಯ ಸಮಿತಿ ಅಧ್ಯಕ್ಷ ಕೆ.ಡಿ ನಾಣಯ್ಯ, ಪ್ರಮುಖರಾದ ಆನಂದ್, ಅನಿಲ್ ಶೆಟ್ಟಿ, ರದೀಶ್, ಸುರೇಶ್ ನೆಲ್ಲಿಕಲ್ ಮತ್ತಿತರರು ಹಾಜರಿದ್ದರು.