ಸೋಮವಾರಪೇಟೆ, ಮೇ 17: ತಾ. 19ರಂದು ಕುಶಾಲನಗರದಿಂದ ಸೋಮವಾರಪೇಟೆಗೆ ಬರುವ 33ಕಿ.ಮೀ. ವಿದ್ಯುತ್ ಮಾರ್ಗದಲ್ಲಿ ಮಳೆಗಾಲದ ಮುಂಜಾಗ್ರತೆಗಾಗಿ ಜಂಗಲ್ ಕಟ್ಟಿಂಗ್ ಮತ್ತು ತುರ್ತು ನಿರ್ವಹಣಾ ಕಾರ್ಯ ಕೈಗೊಳ್ಳುತ್ತಿದ್ದು, ಈ ಹಿನ್ನೆಲೆ ಅಂದು ವಿದ್ಯುತ್ ವ್ಯತ್ಯಯ ವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ. ತಾ. 19ರಂದು ಸೋಮವಾರ ಪೇಟೆ ಪಟ್ಟಣ ಪಂಚಾಯಿತಿ, ಚೌಡ್ಲು, ಹಾನಗಲ್, ದೊಡ್ಡಮಳ್ತೆ, ಐಗೂರು, ಅಬ್ಬೂರುಕಟ್ಟೆ, ಶಾಂತಳ್ಳಿ, ಕಿರಗಂದೂರು, ಬೆಟ್ಟದಳ್ಳಿ, ತೋಳೂರು ಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಬೆಳಿಗ್ಗೆ 10ಗಂಟೆಯಿಂದ ಸಂಜೆ 5.30 ರವರೆಗೆ ವಿದ್ಯುತ್ ಸರಬರಾಜು ಇರುವದಿಲ್ಲ ಎಂದು ಸೋಮವಾರಪೇಟೆ ಸೆಸ್ಕ್ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.