ಮಡಿಕೇರಿ, ಮೇ 17: ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಜೂನ್ 1 ರಿಂದ ಮಾರ್ಚ್ 30 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ತಾ. 24 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಛಾಪಾ ಕಾಗದ, ತಂದೆ, ತಾಯಿ, ಪೋಷಕರ ಹೆಸರಿನಲ್ಲಿರುವ ಜಮೀನಿನ ಆರ್.ಟಿ.ಸಿ., ಜಾತಿ ಪ್ರಮಾಣ ಪತ್ರ, ಫೋಟೋ ಸಲ್ಲಿಸಬೇಕು.
ಅಭ್ಯರ್ಥಿಗಳು ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ ಮಡಿಕೇರಿ ಇಲ್ಲಿ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಅಥವಾ ದೂರವಾಣಿ ಸಂಖ್ಯೆ 08272-228432, 223402 ಅಥವಾ ತಿತಿತಿ.hoಡಿಣiಛಿuಟಣuಡಿe.ಞಚಿಡಿ.ಟಿiಛಿ.iಟಿ ಇಲ್ಲಿ ಪಡೆಯಬಹುದಾಗಿದೆ.
ವಿದ್ಯಾರ್ಥಿ ನಿಲಯಕ್ಕೆ
ವೀರಾಜಪೇಟೆ ತಾಲೂಕಿನಲ್ಲಿರುವ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಪರಿಶಿಷ್ಟ ವರ್ಗದ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 2018-19ನೇ ಸಾಲಿಗೆ ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ 5ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಾಗೂ ಗಿರಿಜನ ಆಶ್ರಮ ಶಾಲೆಗಳಿಗೆ 1ನೇ ತರಗತಿಯಿಂದ 7ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ವಿದ್ಯಾರ್ಥಿ ನಿಲಯಗಳು ಹಾಗೂ ಆಶ್ರಮ ಶಾಲೆಗಳಲ್ಲಿ ಉಚಿತ ವಸತಿ, ಊಟ, ತಿಂಡಿ, ಪುಸ್ತಕ, ಸಮವಸ್ತ್ರ ಹಾಗೂ ಇತರ ನಿಲಯಗಳಲ್ಲಿ ಲಭ್ಯವಾಗುವ ಮೂಲಭೂತ ಸೌಲಭ್ಯಗಳು ಸಂಪೂರ್ಣ ಉಚಿತವಾಗಿರುತ್ತದೆ. ಪರಿಶಿಷ್ಟ ಪಂಗಡ-ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಸಹ ಅನುಪಾತವಾರು ಪ್ರವೇಶ ಪಡೆಯಲು ಅರ್ಹರಾಗಿರುತ್ತಾರೆ.
ಗಿರಿಜನ ಬಾಲಕರ ನಿಲಯ ಕುಟ್ಟ, ತಿತಿಮತಿ, ಪಾಲಿಬೆಟ್ಟ, ಗಿರಿಜನ ಬಾಲಕೀಯರ ನಿಲಯ ಕುಟ್ಟ, ತಿತಿಮತಿ, ಕಾರ್ಮಾಡು, ಗಿರಿಜನ ಆಶ್ರಮ ಶಾಲೆಗಳಾದ ಚೆನ್ನಂಗಿ ಬಸವನಹಳ್ಳಿ, ಮರೂರು ತಿತಿಮತಿ, ನಿಟ್ಟೂರು ಜಾಗಲೆ, ನಾಗರಹೊಳೆ, ಕೋತೂರು, ಗೋಣಿಗದ್ದೆ ಇಲ್ಲಿಗೆ ಸೇರ್ಪಡೆಗೊಳಿಸಲಾಗುವದು.
ಅರ್ಜಿಗಳನ್ನು ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೆÇನ್ನಂಪೇಟೆ ಅಥವಾ ಸಂಬಂಧಿಸಿದ ನಿಲಯ, ಆಶ್ರಮ ಶಾಲೆಗಳ ವಾರ್ಡನ್, ಮುಖ್ಯ ಶಿಕ್ಷಕರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳ ವಾರ್ಡನ್ ಹಾಗೂ ಆಶ್ರಮ ಶಾಲೆಗಳ ಮುಖ್ಯೋಪಾಧ್ಯಾಯರಿಗೆ ಜೂನ್ 10 ರೊಳಗಾಗಿ ಸಲ್ಲಿಸಬೇಕೆಂದು ಪೊನ್ನಂಪೇಟೆ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.