ಮಡಿಕೇರಿ, ಮೇ 18: 2018-19ನೇ ಸಾಲಿಗೆ ಮಡಿಕೇರಿ ತಾಲೂಕು ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಡುವ ಮೆಟ್ರಿಕ್ ಪೂರ್ವ ಬಾಲಕರು ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಂದ ಹಾಗೂ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿ-ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಸೇರ್ಪಡೆಯಾಗಲು ಇಚ್ಚಿಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿಯ ವಿದ್ಯಾರ್ಥಿ ನಿಲಯಗಳ ವಿವರ ಇಂತಿದೆ: ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಮಡಿಕೇರಿ ಟೌನ್ (5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ), ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಟೌನ್ (5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ), ಮೆಟ್ರಿಕ್ ಪೂರ್ವ ಬಾಲಕರ ನಿಲಯ ಚೇರಂಬಾಣೆ (5 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ), ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಮಡಿಕೇರಿ ಟೌನ್.

ವಿದ್ಯಾರ್ಥಿ ನಿಲಯಗಳಲ್ಲಿ ಮಕ್ಕಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯಗಳಿದ್ದು, ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ಅಥವಾ hಣಣಠಿ://ಚಿಜmissioಟಿs.ಞಚಿಡಿ.ಟಿiಛಿ.iಟಿ/hosಣeಟಚಿಜmissioಟಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವಾಗ ಭಾವಚಿತ್ರ, ಆಧಾರ್ ಕಾರ್ಡ್ ಪ್ರತಿ, ವಾಸಸ್ಥಳ ದೃಢೀಕರಣ ಪತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ ಹಾಗೂ ಬ್ಯಾಂಕ್ ಪಾಸ್‍ಬುಕ್ ಪ್ರತಿ ಹಾಗೂ ಹಿಂದಿನ ತರಗತಿ ಅಂಕಪಟ್ಟಿಯನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು (ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆಯ ದೂರವಾಣಿ ಸಂಖ್ಯೆ 08272-223552ನ್ನು ಸಂಪರ್ಕಿಸಬಹುದಾಗಿದೆ.