ಮಡಿಕೇರಿ, ಮೇ 18: ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇಂದು ವಿವಿಧ ಉದ್ದಿಮೆಗಳಿಂದ ಉದ್ಯೋಗ ಮೇಳ ಆಯೋಜಿಸಲಾಗಿತ್ತು, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಜಗನ್ನಾಥ್ ಮಾರ್ಗದರ್ಶನದಲ್ಲಿ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಅಭ್ಯರ್ಥಿಗಳ ನೇರ ಸಂದರ್ಶನ ನಡೆಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಸುಮಾರು 75 ಮಂದಿ ಈ ನೇರ ಸಂದರ್ಶನದಲ್ಲಿ ಭಾಗವಹಿಸಿದ್ದರು.

ಬೆಂಗಳೂರು, ಮೈಸೂರು ಇತರೆಡೆಗಳಿಂದ ವಿವಿಧ ಹುದ್ದೆಗಳಿಗೆ ನಡೆಸಲಾದ ಸಂದರ್ಶನದಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕ, ಯುವತಿಯರು ಪಾಲ್ಗೊಂಡಿದ್ದು, ಆಯ್ಕೆಗೊಂಡವರ ಕುರಿತು ನಿಖರ ಮಾಹಿತಿಗೆ ಸಂಬಂಧಿಸಿದ ಇಲಾಖಾಧಿಕಾರಿ ಸಂಪರ್ಕಕ್ಕೆ ಸಿಕ್ಕಲಿಲ್ಲ.