ಸೋಮವಾರಪೇಟೆ, ಮೇ 19: ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸದನದಲ್ಲಿ ಬಹುಮತ ಸಾಬೀತುಪಡಿಸಲು ಸಾಧ್ಯವಾಗದೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪುಟ್ಟಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿದ ಕಾರ್ಯಕರ್ತರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೆಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಮಾಜಿ ಸಚಿವ ಬಿ.ಎ.ಜೀವಿಜಯ ಪರ ಘೋಷಣೆ ಕೂಗಿದರು.

ಮಡಿಕೇರಿ ಕ್ಷೇತ್ರ ಸಮಿತಿ ಅಧ್ಯಕ್ಷ ಎಚ್.ಆರ್. ಸುರೇಶ್ ಮಾತನಾಡಿ, ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು 5 ವರ್ಷ ಉತ್ತಮ ಸರ್ಕಾರವನ್ನು ನೀಡಲಿದ್ದಾರೆ. ರೈತರ, ಸ್ತ್ರೀಶಕ್ತಿ ಸಂಘದವರ, ಕಾರ್ಮಿಕರ ಸಾಲವನ್ನು ಮನ್ನಾ ಮಾಡಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭ ಪಕ್ಷದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಎಸ್.ಎಂ.ಡಿಸಿಲ್ವಾ, ಮಹಿಳಾ ಘಟಕದ ಅಧ್ಯಕ್ಷೆ ಜಾನಕಿ ವೆಂಕಟೇಶ್, ಪ್ರಮುಖರಾದ ಎ.ಪಿ. ವೀರರಾಜು, ಎ.ಜೆ. ಕೃಷ್ಣಪ್ಪ, ಕಮಲ್, ನಾಗರಾಜ್, ಕುಶಾಲಪ್ಪ, ಕೆ.ಟಿ. ಪ್ರಸಾದ್, ಜಗದೀಶ್, ಶಿವಪ್ಪ, ಜೋಕಿಂವಾಸ್ ಮತ್ತಿತರರು ಇದ್ದರು.

ಕಾಂಗ್ರೆಸ್ ಸಂಭ್ರಮ: ಬಿಜೆಪಿ ಬಹುಮತ ಸಾಬೀತುಪಡಿಸಲು ಸೋತ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿವೇಕನಂದಾ ಸರ್ಕಲ್ ಬಳಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ. ಲೋಕೇಶ್ ಮಾತನಾಡಿ, ಕಾಂಗ್ರೆಸ್, ಜೆಡಿಎಸ್, ಶಾಸಕರಿಗೆ ಆಮಿಷಗಳನ್ನೊಡ್ಡಿ ಅಕ್ರಮವಾಗಿ ಅಧಿಕಾರ ಹಿಡಿಯಲು ಪ್ರಯತ್ನಿಸಿ ಬಿಜೆಪಿ ಸೋತಿದೆ ಎಂದು ಹೇಳಿದರು.

ಪ್ರಮುಖರಾದ ಹಾನಗಲ್ ಮಿಥುನ್, ಶೀಲಾ ಡಿಸೋಜ, ಕೆ.ಎ. ಯಾಕೂಬ್, ಬಿ.ಸಿ. ವೆಂಕಟೇಶ್, ಮೀನಾ ಕುಮಾರಿ, ಬಿ.ಜಿ. ಇಂದ್ರೇಶ್, ಎಚ್.ಎ. ನಾಗರಾಜ್, ಬಸವರಾಜ್, ಬಿ.ಬಿ. ಸತೀಶ್, ಎಚ್.ಎ. ಹಸನಬ್ಬ ಮತ್ತಿತರರು ಇದ್ದರು.

ಶನಿವಾರಸಂತೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ಮತ ಯಾಚಿಸುವಲ್ಲಿ ವಿಫಲರಾಗಿ, ಎರಡೂವರೆ ದಿನಗಳ ನೂತನ ಮುಖ್ಯಮಂತ್ರಿಯಾಗಿ ರಾಜೀಮಾನೆ ನೀಡಿದ್ದು, ಬಳಿಕ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಹಿನ್ನೆಲೆ ಸ್ಥಳೀಯ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಸಾಂಕೇತಿಕವಾಗಿ ಸಂಭ್ರಮಾಚರಣೆ ಮಾಡಿದರು.

ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪಟಾಕಿ ಸಿಡಿಸಿ, ಕುಮಾರಸ್ವಾಮಿ ಪರ ಜಯಘೋಷ ಮಾಡುತ್ತಾ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಮುಖಂಡರಾದ ಮತ್ತೂರು ಮಹೇಶ್, ಎನ್.ಕೆ. ಮೂರ್ತಿ, ಅಕ್ಮಲ್, ಎನ್.ಕೆ. ಕುಶಾಲ ಮತ್ತಿತರ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಸುಂಟಿಕೊಪ್ಪ : ರಾಜ್ಯ ವಿಧಾನಸಭೆಯ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಜೆಡಿಎಸ್ ಪಕ್ಷದ ಕಾರ್ಯಕರ್ತರು ಕನ್ನಡ ವೃತ್ತದಲ್ಲಿ ಪಕ್ಷದ ಧ್ವಜದೊಂದಿಗೆ ಜಮಾವಣೆಗೊಂಡು ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ಧರಾಮಯ್ಯ ಅವರಿಗೆ ಜೈಕಾರ ಕೂಗಿ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭ ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹೆಚ್.ಯು.ಇಸಾಕ್‍ಖಾನ್, ನಗರ ಜೆಡಿಎಸ್ ಅಧ್ಯಕ್ಷ ಯಂಕನ ಕೌಶಿಕ್, ಗ್ರಾ.ಪಂ.ಸದಸ್ಯ ಕೆ.ಇ.ಕರೀಂ ಪಕ್ಷದ ಕಾರ್ಯಕರ್ತರು ಇದ್ದರು.

ನಾಪೆÇೀಕ್ಲು: ಬಿ.ಜೆ.ಪಿ. ಪಕ್ಷದ ಯಡಿಯೂರಪ್ಪ ಅವರು ವಿಧಾನಸಭೆಯಲ್ಲಿ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಾಪೆÇೀಕ್ಲು ಕಾಂಗ್ರೆಸ್ ಮತ್ತು ಜೆ.ಡಿ.ಎಸ್. ಪಕ್ಷದ ಕಾರ್ಯಕರ್ತರು ನಾಪೆÇೀಕ್ಲು ನಗರದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.