ಮಡಿಕೇರಿ, ಮೇ 20: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಐಎಎಸ್, ಕೆಎಎಸ್ ಹಾಗೂ ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿ ವರ್ಗಕ್ಕೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ತಾ. 30 ರಂದು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ಅಥವಾ ಸಹಾಯವಾಣಿ 8050770004 ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮ್ಯಾನ್ಸ್ ಕಾಂಪೌಂಡು ಹತ್ತಿರ ಮಡಿಕೇರಿ. ದೂರವಾಣಿ ಸಂಖ್ಯೆ 08272-225628 ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಮಾಯಾದೇವಿ ಗಲಗಲಿ ಅವರು ತಿಳಿಸಿದ್ದಾರೆ.