ಮಡಿಕೇರಿ, ಮೇ 21 : ಎಲೆಕ್ಟ್ರಾನಿಕ್ ಮತ ಯಂತ್ರಗಳ ಬಳಕೆಯನ್ನು ನಿಷೇಧಿಸಿ, ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಬೇಕೆಂದು ಆಗ್ರಹಿಸಿ ಎಸ್ಡಿಪಿಐ ಜಿಲ್ಲಾ ಮುಖಂಡರು ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಕಳೆದ ಐದಾರು ವರ್ಷಗಳಿಂದ ಇವಿಎಂ ಬಗ್ಗೆ ಆಕ್ಷೇಪ ಕೇಳಿ ಬರುತ್ತಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ವಿಶ್ವಾಸಾರ್ಹ ಮತ್ತು ಪಾರದರ್ಶಕ ಮತದಾನ ವ್ಯವಸ್ಥೆ ಅತೀ ಅಗತ್ಯವಾಗಿದೆ. ತಾ.12ರಂದು ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲೂ ವಿವಿಧೆಡೆ ಇವಿಎಂ ಯಂತ್ರದ ದೋಷಗಳ ಬಗ್ಗೆ ದೂರುಗಳು ಬಂದಿರುತ್ತದೆ. ಮುಂದಿನ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ. ಈ ಸಂದರ್ಭ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್, ನಗರಸಭಾ ಸದಸ್ಯರಾದ ಪೀಟರ್, ಮನ್ಸೂರ್, ಪ್ರಮುಖರಾದ ಉರೈರ, ಹನೀಫ್, ಹಬೀಬ್ ಇದ್ದರು.