ಮಡಿಕೇರಿ ಮೇ 21 : ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಅವರು ‘ಆಧುನಿಕ ಭಾರತದ ಪಿತಾಮಹ’ ಎಂದು ರಾಜೀವ್‍ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ತೆನ್ನಿರಾ ಮೈನಾ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ದಿ.ರಾಜೀವ್ ಗಾಂಧಿ ಅವರ 27ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಂಪೂರ್ಣ ಸಾಕ್ಷರತಾ ಆಂದೋಲನ ಜಾರಿಗೆ, ಪಂಚಾಯತ್ ರಾಜ್ ವ್ಯವಸ್ಥೆಗೆ ತಿದ್ದುಪಡಿ, ಪಕ್ಷಾಂತರ ನಿಷೇಧ ಕಾಯ್ದೆ, ಪ್ರತಿಯೊಂದು ಜಿಲ್ಲೆಗೆ ನವೋದಯ ವಿದ್ಯಾ ಕೇಂದ್ರ, ಬಡತನ ನಿರ್ಮೂಲನೆಗೆ ಜವಾಹರ್ ರೋಜ್‍ಗಾರ್ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಆಧುನಿಕ ಭಾರತದ ಪಿತಾಮಹ ಎನಿಸಿಕೊಂಡರು ಎಂದು ಮೈನಾ ಹೇಳಿದರು.
ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮದ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್ ಮತ್ತಿತರ ಪ್ರಮುಖರು ರಾಜೀವ್ ಗಾಂಧಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಮೂಡಾ ಅಧ್ಯಕ್ಷ ಚುಮ್ಮಿದೇವಯ್ಯ, ಡಿಸಿಸಿ ಸದಸ್ಯ ಹನೀಫ್, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ನಗರಾಧ್ಯಕ್ಷ ಎ.ಜಿ.ರಮೇಶ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜಾನ್‍ಸನ್ ಪಿಂಟೊ, ನಗರ ಮಹಿಳಾ ಅಧ್ಯಕ್ಷೆ ಫ್ಯಾನ್ಸಿ ಪಾರ್ವತಿ, ಕಾರ್ಯದರ್ಶಿ ಚಂದ್ರಶೇಖರ್, ಅಂಬೇಕಲ್ ನವೀನ್ ಕುಶಾಲಪ್ಪ, ಪ್ರಧಾನ ಕಾರ್ಯದರ್ಶಿ ಸ್ವರ್ಣಲತಾ, ನಳಿನಿ, ಅಯಾತ್, ಯುವ ಕಾಂಗ್ರೆಸ್ ಅಧ್ಯಕ್ಷ ಸದಾಮುದ್ದಪ್ಪ, ಸೇರಿದಂತೆ ಕಾರ್ಯ ಕರ್ತರು ಹಾಜರಿದ್ದು ರಾಜೀವ್ ಗಾಂಧಿ ಅವರನ್ನು ಸ್ಮರಿಸಿದರು.