ಮಡಿಕೇರಿ, ಮೇ 26: ಪ್ರಸಕ್ತ (2018-19) ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್‍ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು: ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರಬೇಕು, ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಒಟ್ಟು ಶೇ. 45 ಅಂಕಗಳು ಹಾಗೂ “ವಿಜ್ಞಾನ” ಮತ್ತು “ಗಣಿತ” ವಿಷಯದಲ್ಲಿ ಶೇ. 50 ಅಂಕ ಗಳಿಸಿರಬೇಕು, ಅಭ್ಯರ್ಥಿಗಳು ಇಂಗ್ಲೀಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿರಬೇಕು, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ ಶೇ. 5 ಅಂಕಗಳ ಸಡಿಲಿಕೆ ಇದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು ದಿನಾಂಕ: 1.7.2018 ಕ್ಕೆ 15 ರಿಂದ 23 ರ ವಯೋಮಿತಿಯಲ್ಲಿರಬೇಕು, ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ದಿನಾಂಕ: 1.7.2018 ಕ್ಕೆ 15 ರಿಂದ 25 ರ ವಯೋಮಿತಿಯಲ್ಲಿರಬೇಕು.
ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ (ಡಿಐಸಿ), ಕೊಹಿನೂರು ರಸ್ತೆ, ಮಡಿಕೇರಿ ಇಲ್ಲಿ ಕಚೇರಿ ವೇಳೆಯಲ್ಲಿ ಪಡೆದು ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಜೂನ್ 2 ರೊಳಗಾಗಿ ಕಚೇರಿಗೆ ಸಲ್ಲಿಸುವದು ಅಥವಾ ಜೂನ್ 8 ರೊಳಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರ್ಸಾಪುರ, ಗದಗ್-ಬೆಟ್ಟಗೇರಿ 502102 ರವರಿಗೆ ನೇರವಾಗಿ ಸಲ್ಲಿಸುವದು.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಕಟ್ಟಡ(ಡಿಐಸಿ), ಕೊಹಿನೂರು ರಸ್ತೆ, ಮಡಿಕೇರಿ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08272-220365 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕ ಗುರುಸ್ವಾಮಿ ತಿಳಿಸಿದ್ದಾರೆ.
ಬ್ಯಾಂಕಿಂಗ್ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗೆ
ಪ್ರಸಕ್ತ (2018-19) ಸಾಲಿನಲ್ಲಿ ಪರಿಶಿಷ್ಟ ಪಂಗಡದ ಪದವೀಧರ ಅಭ್ಯರ್ಥಿಗಳಿಗೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ಯು.ಪಿ.ಎಸ್.ಸಿ/ಕೆ.ಪಿ.ಎಸ್.ಸಿ. ಪ್ರೊಬೇಷನರಿ ಅಧಿಕಾರಿಗಳು ಹಾಗೂ ಬ್ಯಾಂಕಿಂಗ್ ಪ್ರೊಬೇಷನರಿ ಅಧಿಕಾರಿ/ಗ್ರೂಪ್-ಸಿ ಮತ್ತು ಎಸ್.ಎಸ್.ಸಿ. ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 6 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‍ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯ, ನಿರ್ದೇಶಕರ ಕಚೇರಿ, 1ನೇ ಮಹಡಿ, ಲೋಟಸ್ ಟವರ್ಸ್, ರೇಸ್‍ಕೋರ್ಸ್ ರಸ್ತೆ, ಬೆಂಗಳೂರು (ಸಹಾಯವಾಣಿ ಸಂಖ್ಯೆ: 9972494764) ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಪೊನ್ನಂಪೇಟೆ- 08274-261261, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ- 08272-223552, ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ-08276-281115, ಯೋಜನಾ ಸಮನ್ವಯಾಧಿಕಾರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೇರಿ- 08272-229983 ಸಂಪರ್ಕಿಸಬಹುದಾಗಿದೆ.
ರಂಗ ಶಿಕ್ಷಣ ಡಿಪ್ಲೋಮಾ ಕೋರ್ಸ್‍ಗೆ
ಕರ್ನಾಟಕ ಸರ್ಕಾರದಿಂದ ಮಾನ್ಯತೆ ಪಡೆದಿರುವ ರಂಗ ಶಿಕ್ಷಣ ಡಿಪ್ಲೋಮಾ ವ್ಯಾಸಂಗಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣದ ಅವಧಿ ಒಂದು ವರ್ಷವಾಗಿದೆ. ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಪದವೀಧರರಿಗೆ ಆದ್ಯತೆ ನೀಡಲಾಗುವದು. ತರಬೇತಿ ಅವಧಿಯಲ್ಲಿ ಊಟ ಮತ್ತು ವಸತಿ ವ್ಯವಸ್ಥೆ ನೀಡಲಾಗುವದು.
ಕರ್ನಾಟಕ ಹಾಗೂ ಭಾರತದ ರಂಗ ತಜ್ಞರು ಮತ್ತು ಅತಿಥಿ ಉಪನ್ಯಾಸಕರಿಂದ ತರಗತಿಗಳನ್ನು ನಡೆಸಲಾಗುವದು. ಒಂದು ವರ್ಷದಲ್ಲಿ ಭಾರತೀಯ ರಂಗಭೂಮಿ, ಕನ್ನಡ ರಂಗಭೂಮಿ ಮತ್ತು ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಶಿಕ್ಷಣದಲ್ಲಿ ರಂಗಭೂಮಿ ಕುರಿತಾದ ಸೈದ್ಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಸಲಾಗುವದು. ಕಳರಿ, ಯೋಗ, ಕಥಕ್ಕಳಿ, ಯಕ್ಷಗಾನ, ಕಂಸಾಳೆ, ಹೆಜ್ಜೆಮೇಳ, ವೀರಗಾಸೆ, ಪ್ರಸಾಧನ, ಬೆಳಕಿನ ವಿನ್ಯಾಸ, ರಂಗ ವಿನ್ಯಾಸ, ವಸ್ತ್ರ ವಿನ್ಯಾಸ ಮುಂತಾದ ಕಾರ್ಯಾಗಾರಗಳ ಜೊತೆಗೆ ಕಾವ್ಯ, ಸಿನಿಮಾ, ಚಿತ್ರಕಲೆ, ಕುರಿತಾದ ಕಮ್ಮಟಗಳು ನಡೆಯುತ್ತವೆ. ಒಂದು ವರ್ಷದಲ್ಲಿ ನಾಲ್ಕರಿಂದ ಐದು ನಾಟಕಗಳ ಅಭ್ಯಾಸ ಹಾಗೂ ಪ್ರದರ್ಶನ ನಡೆಸಲಾಗುತ್ತದೆ.
ಆಸಕ್ತರು ಅರ್ಜಿಗಳನ್ನು ಪ್ರಾಚಾರ್ಯರು, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಸಾಣೆಹಳ್ಳಿ-577515, ಹೊಸದುರ್ಗ ತಾಲೂಕು ಚಿತ್ರದುರ್ಗ. ಅಥವಾ ವೆಬ್‍ಸೈಟ್ ತಿತಿತಿ.ಣheಚಿಣಡಿesಛಿhooಟsಚಿಟಿehಚಿಟಟi.oಡಿg ಡೌನ್‍ಲೋಡ್ ಮಾಡಿ ಜೂನ್ 25 ರೊಳಗೆ ಸಲ್ಲಿಸಬೇಕು. ಸಂದರ್ಶನ ಜೂನ್ 27, 28, 29 ಮತ್ತು 30 ರಂದು ನಡೆಯಲಿದೆ. (ಅಭ್ಯರ್ಥಿಯು ನಾಲ್ಕು ದಿನ ಕಡ್ಡಾಯವಾಗಿ ಪಾಲ್ಗೊಳ್ಳಬೇಕು) ಆಯ್ಕೆಯಾದ ಅಭ್ಯರ್ಥಿಗಳಿಗೆ ಜುಲೈ 15 ರಿಂದ ತರಗತಿಗಳು ಪ್ರಾರಂಭಿಸಲಾಗುವದು. ಹೆಚ್ಚಿನ ಮಾಹಿತಿಗಾಗಿ 08199-243772,9448398144, 9743095604 ನ್ನು ಸಂಪರ್ಕಿಸಬಹುದಾಗಿದೆ.
ವೃತ್ತಿಪರ ಡಿಪ್ಲೋಮಾ ಕೋರ್ಸ್‍ಗೆ
ಪ್ರಸಕ್ತ (2018-19) ಸಾಲಿಗೆ ಮೂರು ವರ್ಷಗಳ ಅವಧಿಯ ಡಿಪ್ಲೋಮಾ ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಚರ್, ಕಮರ್ಷಿಯಲ್ ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಎಂಜಿನಿಯರಿಂಗ್ ಹಾಗೂ ಅನುದಾನ ರಹಿತ ಕೋರ್ಸುಗಳಾದ ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್, ಕಂಪ್ಯೂಟರ್ ಅಪ್ಲಿಕೇಷನ್ಸ್ ಫಾರ್ ದಿ ವಿಷ್ಯುಯಲಿ ಇಂಪೇರ್ಡ್ ಗಳಿಗೆ ವಿಶೇಷಚೇತನ ವಿದ್ಯಾರ್ಥಿ/ ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆಗಳು: ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಕನಿಷ್ಟ ಶೇ. 35 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು, ಮೂಳೆ ಮತ್ತು ಕೀಲು ಅಂಗವಿಕಲತೆ ಶೇ. 40 ಮತ್ತು ಮೇಲ್ಪಟ್ಟು, ಕಿವಿಡರು ಮತ್ತು ಮೂಗು ಅಂಗವಿಕಲತೆ 60ಡಿಬಿ ಮತ್ತು ಮೇಲ್ಪಟ್ಟು, ಭಾಗಶಃ ಮತ್ತು ಪ್ರರ್ಣ ಅಂಧತ್ವ, ಜ್ಯುಯಲರಿ ಡಿಸೈನ್ ಮತ್ತು ಟೆಕ್ನಾಲಜಿ ಕೋರ್ಸಗೆ ಸಾಮಾನ್ಯ (ವಿಶೇಷಚೇತನರಲ್ಲದ) ಅಭ್ಯರ್ಥಿಗಳು ಜೆಎಸ್‍ಎಸ್ ಮಹಾವಿದ್ಯಾಪೀಠದ ಯೋಜನೆಯಡಿಯಲ್ಲಿ ಪ್ರವೇಶ ಪಡೆಯಬಹುದಾಗಿದೆ.
ಭಾಗಶಃ ಮತ್ತು ಪೂರ್ಣ ಅಂಧತ್ವವುಳ್ಳ ಅಭ್ಯರ್ಥಿಗಳು ಇಂಗ್ಲೀಷ್ ಬ್ರೈಲ್ ಭಾಷೆಯ ಜ್ಞಾನ ಹೊಂದಿದ್ದಲ್ಲಿ ಆಧ್ಯತೆಯನ್ನು ನೀಡಲಾಗುವದು. ಪಾಲಿಟೆಕ್ನಿಕ್‍ನ ಯಶಸ್ವಿ ವಿದ್ಯಾರ್ಥಿಗಳಿಗೆ ಉದ್ಯೋಗ ಮತ್ತು ತರಬೇತಿ ಕೇಂದ್ರದ ಮೂಲಕ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡಲಾಗುತ್ತದೆ. ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯದ ಸೌಲಭ್ಯ ಕಲ್ಪಿಸಲಾಗುವದು. ಪ್ರವೇಶಕ್ಕಾಗಿ ಅರ್ಜಿಗಳನ್ನು ಜೆಎಸ್‍ಎಸ್ ವಿಶೇಷಚೇತನರ ಪಾಲಿಟೆಕ್ನಿಕ್, ಜೆಎಸ್‍ಎಸ್ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಸಮುಚ್ಚಯ ಮೈಸೂರು-570006 (ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 100 ಹಾಗೂ ಎಸ್‍ಸಿ/ಎಸ್‍ಟಿ/ಸಿ-1 ವರ್ಗದವರಿಗೆ ರೂ. 50) ನಗದು ಅಥವಾ ಡಿಡಿ/ಎಂಒ ಮೂಲಕ ಮೈಸೂರಿನಲ್ಲಿ ಸಂದಾಯವಾಗುವಂತೆ ಕಳುಹಿಸಿ ಪಡೆಯಬಹುದು ಅಥವಾ ವೆಬ್‍ಸೈಟ್ ತಿತಿತಿ.ರಿssಠಿಜಚಿ.oಡಿg, ಮೂಲಕ ಡೌನ್‍ಲೋಡ್ ಮಾಡಿ ಸಲ್ಲಿಸಬಹುದು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2548315, 2548316 ಸಂಪರ್ಕಿಸಬಹುದಾಗಿದೆ.