ಮಡಿಕೇರಿ, ಮೇ 27: ಪ್ರಸಕ್ತ ಸಾಲಿಗೆ ಸಾರ್ವಜನಿಕ ವಿತರಣೆಗಾಗಿ ಸಸಿ ಬೆಳೆಸುವ ಯೋಜನೆಯಡಿ ಮಡಿಕೇರಿ ಪ್ರಾದೇಶಿಕ ವಿಭಾಗದ ಕುಶಾಲನಗರ, ಸೋಮವಾರಪೇಟೆ, ಶನಿವಾರಸಂತೆ, ಮಡಿಕೇರಿ ಮತ್ತು ಸಂಪಾಜೆ ವಲಯಗಳ ವ್ಯಾಪ್ತಿಯಲ್ಲಿ ಬರುವ ಸಸ್ಯ ಕ್ಷೇತ್ರಗಳಲ್ಲಿ ಪ್ರಸಕ್ತ ಸಾಲಿನ ಮಳೆಗಾಲದಲ್ಲಿ ರೈತರಿಗೆ, ಸಾರ್ವಜನಿಕರಿಗೆ ಮತ್ತು ಸಂಘ-ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ವಿವಿಧ ಜಾತಿ ಸಸಿಗಳನ್ನು ಜೂನ್ 1 ರಂದು ವಿತರಿಸಲಾಗುವದು. ಅರ್ಹ ಫಲಾನುಭವಿಗಳು ಕುಶಾಲನಗರ, ಸೋಮವಾರಪೇಟೆ, ಶನಿವಾರಸಂತೆ, ಮಡಿಕೇರಿ ಮತ್ತು ಸಂಪಾಜೆ ವಲಯಗಳ ಕಚೇರಿಗೆ ಭೇಟಿ ನೀಡಿ ಇದರ ಬಗ್ಗೆ ಹೆಚ್ಚಿನ ಮಾಹಿತಿ ಹಾಗೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.