ಮಡಿಕೇರಿ, ಮೇ 27: ಮದೆನಾಡು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜೂನ್ 1 ರಂದು ಬೆಳಿಗ್ಗೆ 9.30 ಗಂಟೆಯಿಂದ ಕೊಡಗು ಗೌಡ ನಿವೃತ್ತ ನೌಕರರ ಸಂಘದ ಆಶ್ರಯದಲ್ಲಿ ನೇತ್ರ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ರೋಟರಿ ಮಿಸ್ಟಿ ಹಿಲ್ಸ್, ವಿನೋದ್ ಮೆಡಿಕಲ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅಂಧತ್ವ ನಿವಾರಣಾ ವಿಭಾಗ, ಮದೆನಾಡಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ಆಯೋಜಿತ ಶಿಬಿರದಲ್ಲಿ ಡಾ. ಸಿ.ಆರ್. ಪ್ರಶಾಂತ್ ನೇತ್ರ ತಪಾಸಣೆ ನಡೆಸಲಿದ್ದಾರೆ ಎಂದು ಕೊಡಗು ಗೌಡ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಕೋರನ ವಿಶ್ವನಾಥ್ ತಿಳಿಸಿದ್ದಾರೆ.