ಕುಶಾಲನಗರ, ಮೇ 28: ರಾಜ್ಯ ಬಿಜೆಪಿ ಕರೆ ನೀಡಿದ ಬಂದ್ ಕುಶಾಲನಗರದಲ್ಲಿ ಸಂಪೂರ್ಣ ವಿಫಲವಾಗಿದೆ. ಕುಶಾಲನಗರ ಪಟ್ಟಣದಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯಿತು. ಸರಕಾರಿ ಕಛೇರಿಗಳು ಕಾರ್ಯನಿರ್ವಹಿಸಿದವು. ವಾಹನ ಸಂಚಾರ ಎಂದಿನಂತೆ ಕಂಡುಬಂತು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.ಯಾವದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ವೃತ್ತ ನಿರೀಕ್ಷಕ ಕ್ಯಾತೆಗೌಡ, ಠಾಣಾಧಿಕಾರಿಗಳಾದ ಜಗದೀಶ್, ನವೀನ್‍ಗೌಡ ನೇತೃತ್ವದಲ್ಲಿ ಆಯಕಟ್ಟಿನ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಕೂಡಿಗೆಯಲ್ಲೂ ಕೂಡ ಬಂದ್‍ಗೆ ಯಾವದೇ ಪ್ರತಿಕ್ರಿಯೆ ದೊರೆಯಲಿಲ್ಲ. ಜನಜೀವನ ಎಂದಿನಂತಿತ್ತು.