ನಾಪೆÇೀಕ್ಲು, ಮೇ 29: ಕಳೆದ ಕೆಲವು ದಿನಗಳಿಂದ ನಾಪೆÇೀಕ್ಲು ವ್ಯಾಪ್ತಿ ಯಲ್ಲಿ ವಿದ್ಯುತ್ ಇಲ್ಲದೆ ಸಾರ್ವಜನಿ ಕರು ಕತ್ತಲೆಯಲ್ಲಿ ದಿನಕಳೆಯು ವಂತಾಗಿದೆ. ಕೂಡಲೇ ವಿದ್ಯುತ್ ಸರಬರಾಜಿಗೆ ಚೆಸ್ಕಾಂ ಇಲಾಖಾಧಿಕಾರಿ ಗಳು ಕ್ರಮ ಕೈಗೊಳ್ಳಬೇಕೆಂದು ಗ್ರಾ.ಪಂ. ಸದಸ್ಯ ಶಿವಚಾಳಿಯಂಡ ಜಗದೀಶ್, ಕಂಗಾಂಡ ಜಾಲಿ ಪೂವಪ್ಪ, ಪಾಡಿಯಮ್ಮಂಡ ಮನು ಮಹೇಶ್, ಕುಟ್ಟಂಜೆಟ್ಟಿರ ಪೂಣಚ್ಚ, ಕುಂಡ್ಯೋಳಂಡ ಸಂಪತ್ ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂದು ವಾರಗಳಿಂದ ನಾಪೆÇೀಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇಲ್ಲದ ಕಾರಣ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣಗೊಂಡಿದೆ. ನೀರಿಲ್ಲದ ಪರಿಣಾಮ ಜನರು ಕಾವೇರಿ ನದಿಯಿಂದ ವಾಹನಗಳಲ್ಲಿ ನೀರು ತರುತ್ತಿರುವ ಪ್ರಸಂಗ ಎದುರಾಗಿದೆ. ಪಟ್ಟಣದ, ಗ್ರಾ.ಪಂ.ಯ ಸಾರ್ವಜನಿಕ ಶೌಚಾಲ ಯಗಳಲ್ಲಿಯೂ ನೀರಿಲ್ಲದ ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿದೆ. ವಿದ್ಯುತ್ತನ್ನು ನಂಬಿ ನಡೆಸುತ್ತಿರುವ ಸಣ್ಣ ಕೈಗಾರಿಕೆಗಳಿಗೂ ಸಮಸ್ಯೆಯಾಗಿದೆ. ಆದುದರಿಂದ ಕೂಡಲೇ ಸಂಬಂಧಪಟ್ಟ ಅಧಿಕಾರಿ ಗಳು ಸೂಕ್ತ ಕ್ರಮ ಕೈಗೊಳ್ಳ ಬೇಕೆಂದು ಅವರು ಆಗ್ರಹಿಸಿದ್ದಾರೆ.
ಮಡಿಕೇರಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನಾಪೋಕ್ಲು, ಹೊದವಾಡ, ಕೊಟ್ಟಮುಡಿ ಗ್ರಾಮ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಕಳೆದ ಒಂದು ವಾರದಿಂದ ಗ್ರಾಮಗಳು ಕಾರ್ಗತ್ತಲಿನಲ್ಲಿ ಮುಳುಗಿದ್ದರೂ ಚೆಸ್ಕಾಂ ಅಧಿಕಾರಿಗಳು ಯಾವದೇ ಕ್ರಮ ಕೈಗೊಂಡಿಲ್ಲವೆಂದು ಕೊಟ್ಟಮುಡಿ ಗ್ರಾ.ಪಂ ಸದಸ್ಯ ಪಿ.ಎ.ಶಾಫಿ ಆರೋಪಿಸಿದ್ದಾರೆ.
ಅಧಿಕಾರಿಗಳಿಗೆ ಈಗಾಗಲೇ ದೂರು ಸಲ್ಲಿಸಿದ್ದರೂ ಸೂಕ್ತ ಸ್ಪಂದನ ದೊರೆತಿಲ್ಲ. ಶಾಲೆಗಳು ಆರಂಭಗೊಂಡಿದ್ದು, ವಿದ್ಯಾರ್ಥಿಗಳ ವಿದ್ಯಾರ್ಜನೆಗೂ ವಿದ್ಯುತ್ ಕೊರತೆ ಅಡಚಣೆಯಾಗಿದೆ. ನಿರಂತರ ವಿದ್ಯುತ್ ಕಡಿತದಿಂದಾಗಿ ಕುಡಿಯುವ ನೀರಿನ ಸರಬರಾಜಿನಲ್ಲೂ ವ್ಯತ್ಯಯ ಉಂಟಾಗಿದೆ. ಗ್ರಾಮಸ್ಥರು ಸಾಕಷ್ಟು ಕಷ್ಟ, ನಷ್ಟಗಳನ್ನು ಅನುಭವಿಸುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಅಸಮಾಧಾನ ವ್ಯಕ್ತವಾಗುತ್ತಿದೆ ಎಂದು ಶಾಫಿ ತಿಳಿಸಿದ್ದಾರೆ.