ವೀರಾಜಪೇಟೆ, ಮೇ 30: ಕಮಲೇಶ್ ಚಂದ್ರ ಆಯೋಗದ ವೇತನ ವರದಿಯನ್ನು ತಕ್ಷಣ ಜಾರಿಗೊಳಿಸುವದು ಜೊತೆಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಂಚೆ ಕಚೇರಿ ಸಿಬ್ಬಂದಿಗಳು ವೀರಾಜಪೇಟೆಯ ಪ್ರಧಾನ ಅಂಚೆ ಕಚೇರಿ ಮುಂದೆ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ವೀರಾಜಪೇಟೆ ಶಾಸಕ ಕೆ.ಜಿ ಬೋಪಯ್ಯ ಇಂದು ಭೇಟಿ ನೀಡಿ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸಿ ಬೇಡಿಕೆಗಳ ಮನವಿ ಸ್ವೀಕರಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬೋಪಯ್ಯ ಅವರು ಮನವಿ ಪತ್ರವನ್ನು ಲೋಕಸಭಾ ಸದಸ್ಯರ ಮೂಲಕ ಪ್ರಧಾನ ಮಂತ್ರಿ ಹಾಗೂ ಸಂಬಂಧ ಪಟ್ಟ ಸಚಿವರಿಗೆ ತಲುಪಿಸಲಾಗುವದು ಎಂದು ಭರವಸೆ ನೀಡಿದರು.