ಸೋಮವಾರಪೇಟೆ, ಮೇ 30: ಶಾಸಕರಾಗಿ ಆಯ್ಕೆಗೊಂಡ ನಂತರ ಪ್ರಥಮ ಬಾರಿಗೆ ಕೊಡ್ಲಿಪೇಟೆ ಭಾಗಕ್ಕೆ ಆಗಮಿಸಿದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅವರನ್ನು ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ಸ್ವಾಗತಿಸಿ, ವಿಜಯೋತ್ಸವ ಆಚರಿಸಿದರು. ಕೊಡ್ಲಿಪೇಟೆಯ ಪ್ರಮುಖ ಮಾರ್ಗದಲ್ಲಿ ಶಾಸಕರೊಂದಿಗೆ ಮೆರವಣಿಗೆ ನಡೆಸಿದ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು. ನಂತರ ಬ್ಯಾಡಗೊಟ್ಟ ಮತ್ತು ಬೆಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ತಾ.ಪಂ. ಸದಸ್ಯ ಕುಶಾಲಪ್ಪ, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಬಾಬು ರಾಜೇಂದ್ರ ಪ್ರಸಾದ್, ಕಾರ್ಯದರ್ಶಿ ಭಗವಾನ್, ಉಪಾಧ್ಯಕ್ಷ ಪ್ರಸಾದ್ ಪಟೇಲ್, ಜಿಲ್ಲಾ ಸಮಿತಿ ಸದಸ್ಯ ನಾಗರಾಜ್, ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಕುಮಾರ್, ಪ್ರಮುಖರಾದ ಶರತ್, ಯತೀಶ್, ಸುಮಾ ಸುದೀಪ್, ಉಷಾ ತೇಜಸ್ವಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.