ವೀರಾಜಪೇಟೆ, ಮೇ 31: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವೀರಾಜಪೇಟೆ ಸೇವಾ ಕೇಂದ್ರದ ಶಾಖೆಯ ನೂತನ ಕಟ್ಟಡ ಅಪ್ಪಯ್ಯಸ್ವಾಮಿ ರಸ್ತೆಯಲ್ಲಿರುವ ಜ್ಞಾನಗಂಗಾ ಭವನ ತಾ. 3 ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಮೈಸೂರು ಬ್ರಹ್ಮಕುಮಾರಿ ಮೌಲ್ಯಶಿಕ್ಷಣ ವಿಶ್ವವಿದ್ಯಾಲಯದ ಗೌರವ ಪ್ರಾಂಶುಪಾಲ ರಂಗನಾಥ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೂತನ ಕಟ್ಟಡದ ಉದ್ಘಾಟನೆಯನ್ನು ಅರಮೇರಿ ಕಳಂಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಆಂಧ್ರಪ್ರದೇಶದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಜಸ್ಟೀಸ್ ಈಶ್ವರಯ್ಯ, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಬಿ.ಎಲ್. ಬೈರಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಇ.ಸಿ. ಜೀವನ್, ಮಾಜಿ ಅಧ್ಯಕ್ಷ ಎಂ.ಕೆ. ಪೂವಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎನ್.ಪಿ ಹೇಮಕುಮಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕಾಂತಿ ಸತೀಶ್ ಮತ್ತಿತರರು ಪಾಲ್ಗೊಳ್ಳುವರು ಎಂದು ಹೇಳಿದರು.

ಗೋಷ್ಠಿಯಲ್ಲಿ ಸಂಸ್ಥೆಯ ಸಂಚಾಲಕರಾದ ಡಿ.ಕೆ. ಕೋಮಲಾಜಿ, ಮೈಸೂರು ಜ್ಞಾನಸರೋವರದ ನಿರ್ದೇಶಕಿ ಶಾರಾದಾಜಿ, ಸದಸ್ಯರಾದ ಕಾರ್ಯಪ್ಪ, ಮಂಜುನಾಥ್, ಪೊನ್ನಪ್ಪ ಉಪಸ್ಥಿತರಿದ್ದರು.