ಮಡಿಕೇರಿ, ಮೇ 30: ಪ್ರಸಕ್ತ (2018-19) ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ/ ಸಿ.ಇ.ಟಿ ಮೂಲಕ ಸೀಟು ಪಡೆದು ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡಲು ನಿಗಮದಿಂದ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ಪ್ರ-1, ಪ್ರ-2ಎ, ಪ್ರ-3ಎ ಮತ್ತು ಪ್ರ-3ಬಿ ಗೆ ಸೇರಿದ (ವಿಶ್ವಕರ್ಮ ಮತ್ತು ಉಪ ಜಾತಿಗಳನ್ನು ಹಾಗೂ ಅಲ್ಪಸಂಖ್ಯಾತರು ಮತ್ತು ಉಪಜಾತಿಗಳು, ಉಪ್ಪಾರ ಮತ್ತು ಉಪ ಜಾತಿಗಳು ಹಾಗೂ ಬೆಸ್ತ/ ಅಂಬಿಗ ಮತ್ತು ಅದರ ಉಪ ಜಾತಿಗಳನ್ನು ಹೊರತುಪಡಿಸಿ), ವಿದ್ಯಾರ್ಥಿ ಮತ್ತು ಕುಟುಂಬದ ವಾರ್ಷಿಕ ವರಮಾನ ರೂ. 3.50 ಲಕ್ಷಗಳ ಮಿತಿಯಲ್ಲಿರುವ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಸಿ.ಇ.ಟಿ. ಮೂಲಕ ಪ್ರವೇಶಾತಿ ಪಡೆಯುವ ವೃತ್ತಿಪರ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವಾರ್ಷಿಕ ಶೇ. 2 ರ ಬಡ್ಡಿ ದರದಲ್ಲಿ ವಾರ್ಷಿಕ ಗರಿಷ್ಠ ರೂ. 1 ಲಕ್ಷಗಳವರೆಗೆ ಸಾಲ ಮಂಜೂರು ಮಾಡಲಾಗುತ್ತದೆ.

2018-19ನೇ ಸಾಲಿನಲ್ಲಿ ಸಿ.ಇ.ಟಿ. ಮೂಲಕ ಆಯ್ಕೆಯಾಗಿ ಸಾಲ ಪಡೆಯ ಬಯಸುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಿ.ಇ.ಟಿ.ಗೆ ಪಾವತಿಸಬೇಕಾದ ಶುಲ್ಕವನ್ನು ಸಿ.ಇ.ಟಿ.ಯಿಂದ ಸೀಟು ಪಡೆಯುವ ಹಂತದಲ್ಲಿಯೇ ನಿಗಮದಿಂದ ಸಾಲ ಮಂಜೂರು ಮಾಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೊಂದಾಣಿಕೆ ಮಾಡಿಕೊಡಲಾಗುತ್ತದೆ.

ಸಾಲ ಪಡೆಯಲು ಇಚ್ಚಿಸುವ ವಿದ್ಯಾರ್ಥಿಗಳು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವೆಬ್‍ಸೈಟ್ ತಿತಿತಿ.ಞಚಿಡಿಟಿಚಿಣಚಿಞಚಿ.gov.iಟಿ/ಜbಛಿಜಛಿ ರಲ್ಲಿ ಲಾಗಿನ್ ಆಗಿ ವೆಬ್‍ಸೈಟ್‍ನಲ್ಲಿ ಲಭ್ಯವಿರುವ Useಡಿಟಿಚಿme iಟಿಜಿಡಿಚಿ\ಜbಛಿಜಛಿಚಿಡಿivu ಮತ್ತು Pಚಿssತಿಚಿಡಿಜ ಆಃ(ಜ#098 ನ್ನು ನಮೂದಿಸಿ ಅರ್ಜಿಯನ್ನು ಆನ್‍ಲೈನ್‍ಲ್ಲಿ ಭರ್ತಿ ಮಾಡುವದು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ., ಆಧಾರ್ ಕಾರ್ಡ್-ಚುನಾವಣಾ ಗುರುತಿನ ಚೀಟಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಸಿ.ಇ.ಟಿ-ನೀಟ್ ಪ್ರವೇಶ ಪರೀಕ್ಷೆ ಅಡ್ಮಿಷನ್ ಟಿಕೆಟ್ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅರ್ಜಿಯೊಂದಿಗೆ ಆನ್‍ಲೈನ್‍ಲ್ಲಿ ಜೂನ್ 8 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08272-221656 ಸಂಪರ್ಕಿಸಬೇಕೆಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ವಯೋಶ್ರೇಷ್ಠ ಸನ್ಮಾನಕ್ಕೆ

2018ನೇ ಸಾಲಿನ ಕೇಂದ್ರ ಸರ್ಕಾರದ ವಯೋಶ್ರೇಷ್ಠ ಸನ್ಮಾನ (ರಾಷ್ಟ್ರ ಪ್ರಶಸ್ತಿಗೆ) ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ, ಸಂಸ್ಥೆಗಳಿಂದ ಹಿರಿಯ ನಾಗರಿಕರಿಗೆ ಅತ್ಯುತ್ತಮ ಸೇವೆಗಳು ಮತ್ತು ಸೌಲಭ್ಯಗಳನ್ನು ಒದಗಿಸಿದ ಸ್ಥಳೀಯ ನಗರಾಭಿವೃದ್ಧಿ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ನ್ಯಾಯಾಲಯದ ಮುಂಭಾಗ, ಕೋಟೆ ಆವರಣ ಮಡಿಕೇರಿ ಇಲ್ಲಿಂದ ಪಡೆದು ಅಥವಾ ವೆಬ್‍ಸೈಟ್ ತಿತಿತಿ.soಛಿiಚಿಟರಿusಣiಛಿe.ಟಿiಛಿ.iಟಿ ನಿಂದ ಡೌನ್‍ಲೋಡ್ ಮಾಡಿಕೊಂಡು ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಗೆ ಪೂರಕ ದಾಖಲೆಗಳೊಂದಿಗೆ ತ್ರಿಪ್ರತಿಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿ, ಮಡಿಕೇರಿ ಇಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08272-222830, 222829 ಸಂಪರ್ಕಿಸಬಹುದಾಗಿದೆ.

ವಸತಿ ನಿಲಯಗಳಿಗೆ

2018-19ನೇ ಸಾಲಿಗೆ ಸೋಮವಾರಪೇಟೆ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಾದ ಸೋಮವಾರಪೇಟೆ, ಶನಿವಾರಸಂತೆ, ಕೊಡ್ಲಿಪೇಟೆ, ಶಿರಂಗಾಲ, ಕುಶಾಲನಗರ, ಆಲೂರು-ಸಿದ್ದಾಪುರ, ಸುಂಟಿಕೊಪ್ಪ, ಚೆಟ್ಟಳ್ಳಿ ಹಾಗೂ ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕಿಯರ ಆಲೂರು-ಸಿದ್ದಾಪುರ ನಿಲಯಗಳಿಗೆ 5 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

5 ರಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ 2ಎ, 2ಬಿ, 3ಎ, 3ಬಿ ವಾರ್ಷಿಕ ಆದಾಯ ಮಿತಿ ರೂ. 44500, ಪ್ರವರ್ಗ-1ರ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯ ಮಿತಿ ರೂ. 1 ಲಕ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ರೂ. 2 ಲಕ್ಷ ಆಗಿರುತ್ತದೆ. ಪ್ರವೇಶದ ಅರ್ಜಿಯೊಂದಿಗೆ ಜಾತಿ, ಆದಾಯ ದೃಡೀಕರಣ ಪತ್ರ, ಹಿಂದಿನ ಸಾಲಿನಲ್ಲಿ ಉತೀರ್ಣರಾದ ಬಗ್ಗೆ ಅಂಕಪಟ್ಟಿ, ವಾಸಸ್ಥಳ ದೃಢೀಕರಣ ಪತ್ರ, ಪಾಸ್‍ಪೋರ್ಟ್ ಸೈಜಿನ 3 ಫೋಟೊಗಳನ್ನು ಭರ್ತಿಗೊಳಿಸಲಾದ ಅರ್ಜಿಯೊಂದಿಗೆ ಲಗತ್ತಿಸಿ ಸಲ್ಲಿಸತಕ್ಕದ್ದು. (ನವೀಕರಣ ವಿದ್ಯಾರ್ಥಿಗಳಿಗೆ ಜೂನ್ 1 ರಿಂದಲೇ ಪ್ರಾರಂಭಿಸಲಾಗುವದು) ಹೊಸದಾಗಿ ಪ್ರವೇಶ ಕೋರಿ ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿದೆ. ಅರ್ಜಿ ಫಾರಂನ್ನು ಸಂಬಂಧಿಸಿದ ವಿದ್ಯಾರ್ಥಿ ನಿಲಯಗಳಲ್ಲಿ ವಿತರಣೆ ಮಾಡಲಾಗುವದು. ವಿದ್ಯಾರ್ಥಿ ನಿಲಯಗಳಲ್ಲಿ ಉಚಿತವಾಗಿ ಊಟ, ವಸತಿ, ನೋಟ್ ಪುಸ್ತಕ, ಸಮವಸ್ತ್ರ, ವಿಶೇಷ ಭೋಧನೆ, ಇತ್ಯಾದಿ ಸೌಲಭ್ಯಗಳನ್ನು ನೀಡಲಾಗುವದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರು ಹಾಗೂ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ಸೋಮವಾರಪೇಟೆ ದೂರವಾಣಿ ಸಂಖ್ಯೆ 08276-284820 ಸಂಪರ್ಕಿಸಬಹುದಾಗಿದೆ.