ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರ್ವಜನಿಕ ಶಿಕ್ಷಣ, ಪದವಿ ಪೂರ್ವ ಶಿಕ್ಷಣ, ವಕೀಲರ ಸಂಘ, ಜಿಲ್ಲಾ ಬಾಲ ಕಾರ್ಮಿಕರ ಯೋಜನಾ ಸಂಘ, ಸಮಾಜ ಕಲ್ಯಾಣ ನಗರಸಭೆ, ಒಡಿಪಿ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ’ ದಿನಾಚರಣೆ ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆ ಬಗ್ಗೆ ‘ಕಾನೂನು ಅರಿವು-ನೆರವು’ ಕಾರ್ಯಕ್ರಮವು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ನಡೆಯಲಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಕಾಡ್ಲೂರು ಸತ್ಯ ನಾರಾಯಣಾಚಾರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ನೂರುನ್ನಿಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಇತರರು ಪಾಲ್ಗೊಳ್ಳಲಿದ್ದಾರೆ.

ಜನಸಂಪರ್ಕ ಸಭೆ

ವೀರಾಜಪೇಟೆ ಮತ್ತು ಗೋಣಿಕೊಪ್ಪಲು ಉಪ-ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಕೊಡಗು ಮತ್ತು ಚಾಮರಾಜನಗರ ವೃತ್ತದ ಸೆಸ್ಕ್ ಅಧೀಕ್ಷಕ ಎಂಜಿನಿಯರ್ ಅಧ್ಯಕ್ಷತೆಯಲ್ಲಿ ಬೆಳಗ್ಗೆ 11 ಗಂಟೆಯಿಂದ 12 ಗಂಟೆವರೆಗೆ ವೀರಾಜಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಹಾಗೂ ಮಧ್ಯಾಹ್ನ 1 ಗಂಟೆಯಿಂದ 2 ಗಂಟೆಯವರೆಗೆ ಗೋಣಿಕೊಪ್ಪಲು ಉಪ ವಿಭಾಗ ಕಚೇರಿ ಆವರಣದಲ್ಲಿ ಜನಸಂಪರ್ಕ ಸಭೆ ನಡೆಯಲಿದೆ. ವೀರಾಜಪೇಟೆ ಹಾಗೂ ಗೋಣಿಕೊಪ್ಪಲು ವ್ಯಾಪ್ತಿಯ ಸಾರ್ವಜನಿಕರು, ವಿದ್ಯುತ್ ಗ್ರಾಹಕರ ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಬೇಕು ಎಂದು ಸೆಸ್ಕ್ ಇಇ ಸೋಮಶೇಖರ್ ತಿಳಿಸಿದ್ದಾರೆ.