ಕೂಡಿಗೆ, ಜೂ. 12: ಕೂಡಿಗೆಯ ಜ್ಞಾನೋದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಎಂ.ಇ. ಅನಿಷ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಅನುತ್ತೀರ್ಣವಾಗಿದ್ದ ವಿಷಯ ಫಲಿತಾಂಶದಲ್ಲಿ ಪ್ರಕಟವಾಗಿತ್ತು. ಆದರೆ, ವಿದ್ಯಾರ್ಥಿನಿ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಿದ ನಂತರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ವಿದ್ಯಾರ್ಥಿನಿಯ ಉತ್ತರ ಪತ್ರಿಕೆಯನ್ನು ಮರು ಮೌಲ್ಯಮಾಪನ ಮಾಡಿ ಗಣಿತ ಮತ್ತು ವಿಜ್ಞಾನ ವಿಷಯದಲ್ಲಿ ಅತಿ ಹೆಚ್ಚಿನ ಅಂಕಗಳು ಪಡೆದುಕೊಂಡು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾಳೆ. ಈ ವಿದ್ಯಾರ್ಥಿನಿಯ ಫಲಿತಾಂಶದ ಮೂಲಕ ಶಾಲೆಗೆ ಒಟ್ಟಾರೆ. ಶೇ. 93.33 ಫಲಿತಾಂಶ ಬಂದಂತಾಗಿದೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ತಿಳಿಸಿದ್ದಾರೆ.