ಸೋಮವಾರಪೇಟೆ,ಜೂ.12: ಮುಸ್ಲಿಂ ಸಮುದಾಯದ ಪವಿತ್ರ ಹಬ್ಬವಾದ ರಂಜಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಯಾವದೇ ಗೊಂದಲಗಳಿಗೆ ಆಸ್ಪದ ನೀಡಬಾರದು ಎಂದು ಡಿವೈಎಸ್‍ಪಿ ಶ್ರೀನಿವಾಸ್ ಮೂರ್ತಿ ಸೂಚಿಸಿದರು.

ಇಲ್ಲಿನ ಪೊಲೀಸ್ ಠಾಣೆಯಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿದ ಅವರು, ರಂಜಾನ್ ಸಂದರ್ಭ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದರು. ಸೋಮ ವಾರ ಪೇಟೆಯಲ್ಲಿ ಎಲ್ಲಾ ಸಮುದಾಯಗಳ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಇದುವರೆಗೂ ಯಾವದೇ ಗಲಭೆಗಳು ನಡೆದಿಲ್ಲ; ನಡೆಯುವದೂ ಇಲ್ಲ ಎಂದು ಸಭೆಯಲ್ಲಿದ್ದ ಮಸಗೋಡು ಸುರೇಶ್ ಹೇಳಿದರು.

ರಂಜಾನ್ ಅಂಗವಾಗಿ ಪಟ್ಟಣದಲ್ಲಿ ಮೆರವಣಿಗೆ ನಡೆಯು ವದಿಲ್ಲ. ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಖಬರಸ್ಥಾನಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ ಎಂದು ವಿವಿಧ ಮಸೀದಿಗಳ ಪ್ರಮುಖರಾದ ಕೆ.ಎ. ಯಾಕೂಬ್, ಯಾಸ್ಮಿನ್ ಪಾಷ, ಉಮ್ಮರ್, ರಫೀಕ್ ತಿಳಿಸಿದರು.

ಸಭೆಯಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ನಂಜುಂಡೇಗೌಡ, ಹಿಂದೂ ಜಾಗರಣಾ ವೇದಿಕೆಯ ಉಮೇಶ್, ಜಯ ಕರ್ನಾಟಕ ಸಂಘಟನೆಯ ಸುರೇಶ್ ಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ಕೆ.ಎನ್. ದೀಪಕ್, ಇಂದಿರಾಗಾಂಧಿ ಅಭಿಮಾನಿಗಳ ಸಂಘದ ನಾಗರಾಜ್, ಪ್ರಮುಖರಾದ ಇಸ್ಮಾಯಿಲ್, ಮಣಿ, ಬಾಲಕೃಷ್ಣ, ಚಂದ್ರ ಸೇರಿದಂತೆ ಇತರರು ಭಾಗವಹಿಸಿದ್ದರು.