ಸುಂಟಿಕೊಪ್ಪ, ಜೂ.12: ರಂಜಾನ್ ಹಬ್ಬವನ್ನು ಮುಸ್ಲಿಂ ಬಾಂಧವರು ಯಾವದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕೆಂದು ಸುಂಟಿಕೊಪ್ಪ ಠಾಣಾಧಿಕಾರಿ ಜಯರಾಂ ಹೇಳಿದರು.

ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ರಂಜಾನ್ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ವಿವಿಧ ಧರ್ಮಗಳ ಮುಖಂಡರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸಭೆಯಲ್ಲಿ ಅವರು ಮಾತನಾಡಿದರು.

ರಂಜಾನ್ ಹಬ್ಬದಂದು ಮುಸ್ಲಿಂ ಬಾಂಧವರು ಮೆರವಣಿಗೆ ನಡೆಸುವಾಗ ಸೂಕ್ತ ಪೊಲೀಸ್ ಬಂದೋಬಸ್ತ್‍ನ್ನು ಕಲ್ಪಿಸಲಾಗುವದು ಎಲ್ಲಾ ಸಹಕಾರ ನೀಡಲಾಗುವದು. ಕಾನೂನಿಗೆ ವಿರುದ್ಧವಾಗಿ ನಡೆದರೆ ಯಾರೇ ಆದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಎಚ್ಚರಿಕೆಯಿತ್ತರು. ಎಎಸ್‍ಐ ಪಾರ್ಥ ಮಾತನಾಡಿದರು.

ಇಲ್ಲಿನ ಎಲ್ಲಾ ಮಸೀದಿಗಳ ಮುಖಂಡರು ಗ್ರಾ.ಪಂ. ಅಧ್ಯಕ್ಷೆ ರೋಸ್‍ಮೇರಿ ರಾಡ್ರಿಗಸ್ ಉಪಾಧ್ಯಕ್ಷ ಪಿ.ಆರ್.ಸುಕುಮಾರ್, ಗ್ರಾ.ಪಂ.ಸದಸ್ಯ ರಜಾಕ್, ನಗರ ಬಿಜೆಪಿ ಅಧ್ಯಕ್ಷ ಪಿ.ಆರ್.ಸುನಿಲ್‍ಕುಮಾರ್, ಬಿ.ಕೆ.ಮೋಹನ, ಎಂ.ಎ.ವಸಂತ ಮತ್ತಿತರರು ಇದ್ದರು.