ಕುಶಾಲನಗರ, ಜೂ. 13: ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಮುಖಾಮುಖಿ ಅಪಘಾತದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು ಓರ್ವ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಕುಶಾಲನಗರ ಆನೆಕಾಡು ಬಳಿ ನಡೆದಿದೆ.

ಮಡಿಕೇರಿ ಸಮೀಪದ ಕಾಟಕೇರಿ ನಿವಾಸಿ ಫಿಲೋಮಿನಾ (55) ಮೃತ ದುರ್ದೈವಿ. ಕಾರು (ಕೆಎ.12.ಪಿ.4066) ಚಲಾಯಿಸುತ್ತಿದ್ದ ಇವರ ಪುತ್ರ ಪ್ರವೀಣ್ ಡ್ಯಾನಿಯಲ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿದೆ. ಕುಟುಂಬ ಸದಸ್ಯರು ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದ್ದು ಕಾರಿನಲ್ಲಿದ್ದ ಪ್ರವೀಣ್ ಅವರ ಪತ್ನಿ ಅಪಾಯದಿಂದ ಪಾರಾಗಿದ್ದಾರೆ. ಮಿನಿ ಲಾರಿ ಕುಶಾಲನಗರ ಕಡೆಯಿಂದ ಮಡಿಕೇರಿ ಕಡೆಗೆ ತೆರಳುತ್ತಿತ್ತು. ಕಾರಿನ ಅತಿ ವೇಗದ ಚಾಲನೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.