ಮಡಿಕೇರಿ, ಜೂ. 15: ಪ್ರಸಕ್ತ (2018-19) ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಂದ ಮುಖ್ಯ ಶಿಕ್ಷಕರು, ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರಾಗಿ (ಪದವಿಧರೇತರ ಮುಖ್ಯ ಶಿಕ್ಷಕರು) ಬಡ್ತಿ ನೀಡುವ ಸಲುವಾಗಿ ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿದೆ.

ಜೇಷ್ಠತಾ ಪಟ್ಟಿಯಲ್ಲಿ ನ್ಯೂನತೆಗಳು ಇದ್ದಲ್ಲಿ ಸಂಬಂಧಿಸಿದ ಶಿಕ್ಷಕರು ಆಯಾಯ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ 7 ದಿನಗಳೊಳಗೆ ಆಕ್ಷೇಪಣೆ-ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಮಂಜುಳಾ ಕೋರಿದ್ದಾರೆ.