ಮಡಿಕೇರಿ ಜೂ. 15 : ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ. ದೇಶಪಾಂಡೆ ತಾ. 17 ಮತ್ತು 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ತಾ. 17 ರಂದು ಸಂಜೆ 4.30 ಗಂಟೆಗೆ ಮಡಿಕೇರಿಗೆ ಆಗಮಿಸಿ ಸಾರ್ವಜನಿಕರು ಹಾಗೂ ಅಧಿಕಾರಿಗಳನ್ನು ಭೇಟಿ ಮಾಡಲಿದ್ದಾರೆ.

ತಾ. 18 ರಂದು ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 11 ಗಂಟೆಗೆ ಕೊಡಗು ಜಿಲ್ಲೆಯ ಮಳೆ-ಬೆಳೆ ಪರಿಸ್ಥಿತಿ, ಮಳೆಹಾನಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಬಗ್ಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ತಿಳಿಸಿದ್ದಾರೆ.

ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಾ. 19 ರಂದು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಚಿವರು ತಾ/ 19 ರಂದು ಸಂಜೆ 4.30 ಗಂಟೆಗೆ ಇತ್ತೀಚಿನ ಭಾರಿ ಮಳೆ ಮತ್ತು ನೆರೆ ಹಾವಳಿಯಿಂದ ಕೊಡಗು ಜಿಲ್ಲೆಯಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಬಗ್ಗೆ ಚರ್ಚೆ ಹಾಗೂ ತುರ್ತು ದುರಸ್ತಿ ಕೈಗೊಂಡಿರುವ ಬಗ್ಗೆ ಪರಿಶೀಲನೆ ಮಾಡಲಿದ್ದಾರೆ ಎಂದು ಸಚಿವರ ವಿಶೇಷಾಧಿಕಾರಿ ಎನ್. ನರೇಂದ್ರ ಅವರು ತಿಳಿಸಿದ್ದಾರೆ.