ಮಡಿಕೇರಿ, ಜೂ. 15: ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಪೂರ್ವಭಾವಿಯಾಗಿ ತಾ. 17 ರಂದು ಯೋಗವಾಕ್ (ಯೋಗಥಾನ್) ನಡೆಯಲಿದೆ. ಯೋಗವಾಕ್‍ಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ನಗರದ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ 8 ಗಂಟೆಗೆ ಚಾಲನೆ ನೀಡಲಿದ್ದಾರೆ.

ಜಾಥಾವು ಜನರಲ್ ತಿಮ್ಮಯ್ಯ ವೃತ್ತದ ಮೂಲಕ ಪ್ರಮುಖ ರಸ್ತೆ ಮಾರ್ಗ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದ ಮೂಲಕ ಕಾಲೇಜು ರಸ್ತೆ ಮಾರ್ಗ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣಕ್ಕೆ ಬಂದು ಜೂನಿಯರ್ ಕಾಲೇಜು ರಸ್ತೆ ಮುಖಾಂತರ ಶ್ರೀ ಓಂಕಾರೇಶ್ವರ ದೇವಸ್ಥಾನದ ಎದುರಾಗಿ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಮುಕ್ತಾಯಗೊಳ್ಳಲಿದೆ. ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗಥಾನ್ ಕಾರ್ಯಕ್ರಮ ಯಶಸ್ವಿ ಗೊಳಿಸಿಕೊಡಬೇಕಾಗಿ ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ. ಬಿ.ಹೆಚ್. ರಾಮಚಂದ್ರ ಕೋರಿದ್ದಾರೆ.