ಮಡಿಕೇರಿ, ಜೂ. 15: ಬಡ ಹಾಗೂ ಅನಾಥ ಮಕ್ಕಳ ಶಿಕ್ಷಣಕ್ಕಾಗಿ ಸಹಕಾರ ನೀಡುತ್ತಿರುವ ಬೇಗ್ ಸಂಸ್ಥೆ ಈ ಬಾರಿ ಕೂಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿದೆ.

ನಗರದ ಕೂರ್ಗ್ ಕಮ್ಯುನಿಟಿ ಹಾಲ್‍ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೇಗ್ ಸಂಸ್ಥೆಯ ಪ್ರಮುಖ ಜಾವೇದ್ ಅಹ್ಮದ್ ಬೇಗ್, ವಾಜಿóದ್ ಅಹ್ಮದ್ ಬೇಗ್ ಹಾಗೂ ಸಾಜಿದ್ ಅಹ್ಮದ್ ಬೇಗ್, ನಗರಸಭಾ ಸದಸ್ಯ ಅಮೀನ್ ಮೊಹಿಸಿನ್, ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಜಿ.ಹೆಚ್. ಮೊಹಮ್ಮದ್ ಹನೀಫ್ 300 ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಹಾಗೂ ಪುಸ್ತಕಗಳನ್ನು ವಿತರಿಸಿದರು.

ಸಾಮಾಜಿಕ ಕಳಕಳಿಯೊಂದಿಗೆ 1953 ರಲ್ಲಿ ದಿ. ಎಂ. ಮೊಹಿದ್ದೀನ್ ಬೇಗ್ ಹಾಗೂ ಪತ್ನಿ ಖ್ಯೆರೂನ್ ಬೀ ಅವರು ಬೇಗ್ ಸಂಸ್ಥೆಯನ್ನು ಸ್ಥಾಪಿಸಿದರು. ನಂತರದ ವರ್ಷಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ ಮತ್ತು ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸುತ್ತಾ ಬರಲಾಗುತ್ತಿದ್ದು, ಇದೀಗ ಈ ದಂಪತಿಗಳ ಮಕ್ಕಳು ಹಾಗೂ ಮೊಮ್ಮಕ್ಕಳು ಸಮಾಜಮುಖಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.