ಮಡಿಕೇರಿ, ಜೂ. 16: ಅತಿವೃಷ್ಟಿ ಸಂದರ್ಭದಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಲು ಹಾಗೂ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಮತ್ತು ತಾಲೂಕು ಕಚೇರಿಗಳು ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿ ತೆರೆಯಲಾಗಿದೆ. ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ ವಿವರ ಇಂತಿದೆ. ಜಿಲ್ಲಾಧಿಕಾರಿ ಕಚೇರಿ-08272-221077, ಜಿಲ್ಲಾ ಅಗ್ನಿಶಾಮಕ ಕಚೇರಿ-101, 08272-229299, ಮಡಿಕೇರಿ ತಾಲೂಕು ಕಚೇರಿ-08272-228396, ನಗರಸಭೆ-08272-220111, ಸೋಮವಾರಪೇಟೆ ತಾಲೂಕು ಕಚೇರಿ-08276-282045, ವೀರಾಜಪೇಟೆ ತಾಲೂಕು ಕಚೇರಿ- 08274-256328 ಈ ದೂರವಾಣಿ ಸಂಖ್ಯೆಗಳಿಗೆ ಸಾರ್ವಜನಿಕರು ತುರ್ತು ಸಂದರ್ಭ ಸಮಸ್ಯೆಗಳಿದ್ದಲ್ಲಿ ಕರೆ ಮಾಡಿ ದೂರು ದಾಖಲಿಸಬಹುದು ಎಂದು ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ತಿಳಿಸಿದ್ದಾರೆ.