ಮಡಿಕೇರಿ ಜೂ. 16 : ಮಡಿಕೇರಿ ನೆಹರು ಯುವ ಕೇಂದ್ರ, ಕೊಡಗು ಜಿಲ್ಲಾ ಮತ್ತು ವೀರಾಜಪೇಟೆ ಯುವ ಒಕ್ಕೂಟ ಹಾಗೂ ಪೊನ್ನಂಪೇಟೆ ನಿಸರ್ಗ ಯುವತಿ ಮಂಡಳಿ ಇದರ ಸಂಯುಕ್ತಾಶ್ರಯದಲ್ಲಿ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ “ನೆರೆಹೊರೆ ಯುವಜನ ಸಂಸತ್ತು’’ ಕಾರ್ಯಕ್ರಮ ನಡೆಯಿತು. ಪೊನ್ನಂಪೇಟೆ ಶ್ರೀ ರಾಮಕೃಷ್ಣ ಆಶ್ರಮ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಶ್ರೀ ರಾಮಕೃಷ್ಣ ಆಶ್ರಮದ (ಮೊದಲ ಪುಟದಿಂದ) ಶ್ರೀ ಬೋದಸ್ವರೂಪಾನಂದ ಸ್ವಾಮೀಜಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವೀರಾಜಪೇಟೆ ತಾಲೂಕು ಯುವ ಒಕ್ಕೂಟದ ಅಧ್ಯಕ್ಷೆ ಶೀಲಾ ಬೋಪಣ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪೊನ್ನಂಪೇಟೆ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಆಶ್ರಮದ ಯೋಗ ಶಿಕ್ಷಕ ಮರಿಯ ಜಾನ್ ಯೋಗ ಪ್ರಾತ್ಯಕ್ಷತೆ ಮತ್ತು ‘ಉತ್ತಮ ಸಮಾಜಕ್ಕಾಗಿ ಯೋಗ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ಕೊಡಗು ಜಿಲ್ಲಾ ಪತ್ರಕರ್ತರ ವೇದಿಕೆ ಅಧ್ಯಕ್ಷ ಶ್ರೀಧರ್ ನೆಲ್ಲಿತ್ತಾಯ ‘ಸ್ವಚ್ಛತೆ ಭಾರತ ಆಂದೋಲನದಡಿಯಲ್ಲಿ ಗ್ರಾಮೀಣ ಯುವಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು. ನಿಸರ್ಗ ಯುವತಿ ಮಂಡಳಿ ಅಧ್ಯಕ್ಷೆ ರೇಖಾ ಶ್ರೀಧರ್ ಇದ್ದರು.