ನಾಪೆÇೀಕ್ಲು, ಜೂ. 16: ಕುಂಜಿಲ ಗ್ರಾಮದ ಪಾಡಿ ಶ್ರೀ ಇಗ್ಗುತ್ತಪ್ಪ ದೇವಳದ ಬಳಿ ನಾಲ್ಕು ಕಾಡಾನೆಗಳ ಹಿಂಡು ಕಾಫಿ ತೋಟಗಳಿಗೆ ಲಗ್ಗೆಯಿಟ್ಟು ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ಬೆಳೆಗಾರರು ತಿಳಿಸಿದ್ದಾರೆ.
ಗ್ರಾಮದ ಕಣಿಯರ, ಕೋಲೆಯಂಡ, ಕಂಬೆಯಂಡ, ಪೆÇಂಗೇರ ಕುಟುಂಬಸ್ಥರ ಕಾಫಿ ತೋಟಗಳಲ್ಲಿ ಸುತ್ತಾಡುತ್ತಿರುವ ಕಾಡಾನೆಗಳ ಹಿಂಡು ಕಾಫಿ, ಕಾಳುಮೆಣಸು, ಬಾಳೆ, ಏಲಕ್ಕಿ, ತೆಂಗು, ಅಡಿಕೆ ಗಿಡಗಳನ್ನು ನಾಶಪಡಿಸಿವೆ. ಇದರಿಂದ ಕಣಿಯರ ನಾಣಯ್ಯ ಅವರ ತೋಟದಲ್ಲಿ ಹೆಚ್ಚಿನ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.
ಆದುದರಿಂದ ಅರಣ್ಯ ಇಲಾಖೆ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.